ದಿನೇಶ್ವರ್ ಶರ್ಮಾ 
ದೇಶ

ಕಾಶ್ಮೀರ ನೂತನ ರಾಜ್ಯಪಾಲರಾಗಿ ದಿನೇಶ್ವರ್ ಶರ್ಮಾ ನೇಮಕ ಸಾಧ್ಯತೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರ ಪತನಗೊಂಡಿದ್ದು, ಇದರ ಬೆನ್ನಲ್ಲೇ ಕಾಶ್ಮೀರದಲ್ಲಿ...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರ ಪತನಗೊಂಡಿದ್ದು, ಇದರ ಬೆನ್ನಲ್ಲೇ ಕಾಶ್ಮೀರದಲ್ಲಿ ಕೇಂದ್ರದ ವಿಶೇಷ ಪ್ರತಿನಿಧಿಯಾಗಿರುವ ದಿನೇಶ್ವರ್ ಶರ್ಮಾ ಅವರು ಕಣಿವೆ ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕಗೊಳ್ಳುವ ಸಾಧ್ಯತೆ ಇದೆ.
ಕಾಶ್ಮೀರ ರಾಜ್ಯಪಾಲ ಎನ್ ಎನ್ ವೊಹ್ರಾ ಅವರ ಅವಧಿ ಜೂನ್ 25ಕ್ಕೆ ಮುಕ್ತಾಯಗೊಳ್ಳುತ್ತಿದ್ದು, ಮುಂದಿನ ರಾಜ್ಯಪಾಲರ ನೇಮಕಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಇಂದು ತಮ್ಮ ನಿವಾಸದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಚರ್ಚಿಸಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಅವರು ಸಹ ಕಾಶ್ಮೀರದ ಮುಂದಿನ ರಾಜ್ಯಪಾಲರ ನೇಮಕಕ್ಕೆ ಹೆಚ್ಚು ಮಹತ್ವ ನೀಡಿದ್ದು, ಈ ಕುರಿತು ಇಂದು ಬೆಳಗ್ಗೆ ಸುಮಾರು 15 ನಿಮಿಷಗಳ ಕಾಲ ಬಿಜೆಪಿ ಅಧ್ಯಕ್ಷರೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಚುನಾವಣೆ ಘೋಷಣೆಯಾದ್ರೆ 25 ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ ಹೊಸ ಬಾಂಬ್‌

KPSC ನೇಮಕಾತಿ ಹಗರಣದ ಕಿಂಗ್‌ಪಿನ್ ಬಸವರಾಜ್ ಕನ್ನಾಳೆಗೆ 5 ದಿನ ಜಾಮೀನು ಮಂಜೂರು; ಇಲ್ಲಿದೆ ಕಾರಣ...

ರಸ್ತೆ ಮಧ್ಯೆ ನಮಾಜ್ ಮಾಡುತ್ತಿದ್ದ ಪಾಕ್‌ ಮೂಲದ ವಿದ್ಯಾರ್ಥಿನಿಗೆ ಕಾರು ಢಿಕ್ಕಿ, ಸಾವು; ಚಾಲಕನಿಗೆ ಜೈಲು ಶಿಕ್ಷೆ ವಿನಾಯಿತಿ!