ನವದೆಹಲಿ: ಅತ್ತ ಬಿಜೆಪಿ-ಪಿಡಿಪಿ ಮೈತ್ರಿ ಮುರಿದುಬೀಳುತ್ತಿದ್ದಂತೆ ಇತ್ತ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿವಾಸದಲ್ಲಿ ಕಾಂಗ್ರೆಸ್ ನ ಕಾಶ್ಮೀರ ಸಮಿತಿ ಸಭೆ ನಡೆದಿದೆ.
ಬಿಜೆಪಿ-ಪಿಡಿಪಿ ಮೈತ್ರಿ ಮುರಿದು ಬೀಳುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್ ಪಕ್ಷ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲವೆಂದು ಸ್ಪಷ್ಟಪಡಿಸಿತ್ತು. ಆದರೆ ಈಗ ಡಾ.ಸಿಂಗ್ ನಿವಾಸದಲ್ಲಿ ನಡೆದಿರುವ ಸಭೆ ಕುತೂಹಲ ಮೂಡಿಸಿದೆ.
ಮೈತ್ರಿಕೂಟ ಛಿದ್ರವಾಗಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಬಿಜೆಪಿ-ಪಿಡಿಪಿಯೊಂದಿಗೆ ಮೈತ್ರಿ ಮಾಡುವ ಮೂಲಕ ದೊಡ್ಡ ತಪ್ಪು ಮಾಡಿದೆ ಎಂದು ಹೇಳಿದ್ದರು.