ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಮೆಹಬೂಬಾ ಮುಫ್ತಿ
ನವದೆಹಲಿ; ಪ್ರತಿಪಕ್ಷಗಳಿಂದ ಅಪವಿತ್ರ ಮೈತ್ರಿ ಎಂದೇ ಕರೆಯಲ್ಪಡುತ್ತಿದ್ದ ಹಾಗೂ ಕಣಿವೆ ರಾಜ್ಯದಲ್ಲಿ ನಡೆಯುತ್ತಿದ್ದ ವ್ಯಾಪಕ/ಹಿಂಸೆ/ಭಯೋತ್ಪಾದಕ ಚಟುವಟಿಕೆಗಳಿಂದ ತೀವ್ರ ಟೀಕೆಗೆ ಟೀಕೆಗೆ ಗುರಿಯಾಗಿದ್ದ ಜಮ್ಮು-ಕಾಶ್ಮೀರದ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ ಪತನಗೊಂಡಿದ್ದು, ರಾಜ್ಯಪಾಲರ ಆಡಳಿತವನ್ನು ಹೇರಲಾಗಿದೆ. ಈ ಹಿನ್ನಲೆಯಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಉನ್ನತ ಮಟ್ಟದ ಸಭೆಯನ್ನು ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ರಾಜ್ಯದಲ್ಲಿ ಉಗ್ರವಾದ ಮಿತಿಮೀರಿದ್ದು, ರಾಜ್ಯದಲ್ಲಿನ ಪರಿಸ್ಥಿತಿ ಅಸಹನೀಯವಾಗಿದೆ ಎಂದು ಬಿಜೆಪಿ ನಿನ್ನೆಯಷ್ಟೇ ದಿಢೀರನೇ ಬೆಂಬಲ ವಾಪಸ್ ಪಡೆದುಕೊಂಡಿತ್ತು. ಇದರಂತೆ 4 ವರ್ಷಗಳ ಹಳೆಯ ದೋಸ್ತಿ ಸರ್ಕಾರದ ಆಳ್ವಿಕೆ ಅಂತ್ಯಗೊಂಡಿದೆ. ಅಲ್ಲದೆ, ಯಾವುದೇ ಇತರೆ ಪಕ್ಷಗಳು ಹೊಂದಾಣಿಕೆಗೆ ಮುಂದಾಗದ ಕಾರಣ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯಪಾಲರ ಆಳ್ವಿಕೆಯನ್ನು ಹೇರಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ಮುರಿದು ಬಿದ್ದಿರುವ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಉನ್ನತ ಮಟ್ಟದ ಸಭೆಯನ್ನು ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂಪಡೆದ ಬಳಿಕ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ರಾಜೀನಾಮೆ ಪತ್ರವನ್ನು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಎನ್ಎನ್ ವೊಹ್ರಾ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಲ್ಲಿಸಿದ್ದರು. ಇದೀಗ ರಾಷ್ಟ್ರಪತಿಗಳು ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆಂದು ರಾಜಭವನದ ವಕ್ತಾರರು ಹೇಳಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವ ಗೃಹ ಸಚಿವಾಲಯದ ವಕ್ತಾರರು, ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸ್ವಗೃಹದಲ್ಲಿ ಗೃಹ ಸಚಿವಾಲಯದ ಕಾರ್ಯದರ್ಶಿ ರಾಜೀವ್ ಗೌಬಾ ಹಾಗೂ ಗುಪ್ತಚರ ಇಲಾಖೆ ಹಿರಿಯ ಅಧಿಕಾರಿಗಳು, ಸಚಿವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದು, ರಾಜ್ಯದ ಪರಿಸ್ಥಿತಿ ಕುರಿತಂತೆ ಮಾತುಕತೆ ನಡೆಸಿದ್ದಾರೆಂದು ಹೇಳಿದ್ದಾರೆ.
ತದ್ವಿರುದ್ಧ ಚಿಂತನೆಯನ್ನು ಹೊಂದಿರುವ ಬಿಜೆಪಿ ಹಾಗೂ ಪಿಡಿಪಿ ನಡುವೆ ಮೈತ್ರಿ ಆಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆಗೊಂಡಿದ್ದೇ ಹಲವರಲ್ಲಿ ಅಚ್ಚರಯನ್ನುಂಟು ಮಾಡಿತ್ತು. ಕಾಶ್ಮೀರಿ ಉಗ್ರರ ದಮನ, ಪ್ರತ್ಯೇಕತಾವಾದಿಗಳ ಜೊತೆ ಮಾತುಕತೆ ವಿಚಾರದಲ್ಲಿ ಪಿಡಿಪಿ-ಬಿಜೆಪಿ ನಡುವೆ ಭಿನ್ನಾಭಿಪ್ರಾಯಗಳು ಮೂಡಿತ್ತು.
ಇದಲ್ಲದೆ, ಸೇನೆ, ಅಧಿಕಾರಿಗಳು ವರ್ಸಸ್ ಕಾಶ್ಮೀರ ಪೊಲೀಸರ ಗಲಾಟೆಯಲ್ಲೂ ಉಭಯ ಕಪಕ್ಷಗಳ ನಡುವೆ ವೈರುಧ್ಯ ಏರ್ಪಟ್ಟಿತ್ತು. ಇತ್ತೀಚಿನ ಕಠುವಾ ಅಪ್ರಾಪ್ತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ವಿವಾದದಲ್ಲಿ ಉಭಯ ಪಕ್ಷಗಳ ನಡುವೆ ಭಾರೀ ಮುನಿಸು ಉಂಟಾಗಿತ್ತು. ಆದರೆ, ರಂಜಾನ್ ಕದನ ವಿರಾಮ ಉಲ್ಲಂಘನೆ, ಪತ್ರಕರ್ತನ ಹತ್ಯೆ ವಿವಾದಿಂದಾಗಿ ಇದೀಗ ಜಮ್ಮು ಮತ್ತು ಕಾಶ್ಮೀರದಲ್ಲಿ ಮೈತ್ರಿ ಮುರಿದುಬಿದ್ದಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos