ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕಾಶ್ಮೀರ ಬಿಜೆಪಿಯನ್ನು ಎಂದಿಗೂ ಕ್ಷಮಿಸಲ್ಲ: ಶಿವಸೇನೆ

ಬಿಜೆಪಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಮಿತ್ರ ಪಕ್ಷ ಶಿವಸೇನೆ, ಜಮ್ಮು ಮತ್ತು ಕಾಶ್ಮೀರ ಬಿಜೆಪಿಯ ದುರಾಶೆಯನ್ನು...

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ
Lingaraj Badiger
Updated On : 21 Jun 2018, 3:57 am
ಮುಂಬೈ: ಬಿಜೆಪಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಮಿತ್ರ ಪಕ್ಷ ಶಿವಸೇನೆ, ಜಮ್ಮು ಮತ್ತು ಕಾಶ್ಮೀರ ಬಿಜೆಪಿಯ ದುರಾಶೆಯನ್ನು ಎಂದಿಗೂ ಕ್ಷಮಿಸಲ್ಲ ಎಂದು ಹೇಳಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಮತ್ತು ಹಿಂಸಾಚಾರ ನಿಯಂತ್ರಿಸಲು ಬಿಜೆಪಿ ಸಂಪೂರ್ಣ ವಿಫಲವಾಗಿದ್ದು, ಈಗ ಪಿಡಿಪಿ ವಿರುದ್ಧ ಆರೋಪ ಮಾಡುತ್ತಿದೆ. ಇದು ಬ್ರಿಟಿಷರನ್ನು ಭಾರತದಿಂದ ಹೊರ ಹಾಕಿದಂತಿದೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಆರೋಪಿಸಿದೆ.
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಸೇನೆ, ದೇಶ ಮುನ್ನಡೆಸುವುದು ಮಕ್ಕಳ ಆಟ ಅಲ್ಲ ಎಂದಿದೆ.

Advertisement

Advertisement

ಕಣಿವೆ ರಾಜ್ಯದಲ್ಲಿ ಬಿಜೆಪಿ, ಪಿಡಿಪಿಗೆ ನೀಡಿದ್ದ ಬೆಂಬಲ ಹಿಂಪಡೆ ಹಿನ್ನೆಲೆಯಲ್ಲಿ ಸಮಿಶ್ರ ಸರ್ಕಾರ ಪತನಗೊಂಡಿದ್ದು, ನಿನ್ನೆ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದೆ.
ಬಿಜೆಪಿ ಕಾಶ್ಮೀರದಲ್ಲಿ ಅರಾಜಕತೆ ಸೃಷ್ಟಿಸಿದ ನಂತರ ಅಧಿಕಾರದಿಂದ ಹೊರ ಬಂದಿದೆ ಎಂದು ಶಿವಸೇನೆ ಆರೋಪಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement