ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದ್ರ ರೈನಾ 
ದೇಶ

ಪಾಕ್'ನಿಂದ ಜಮ್ಮು-ಕಾಶ್ಮೀರ ಬಿಜೆಪಿ ಅಧ್ಯಕ್ಷನಿಗೆ ಜೀವ ಬೆದರಿಕೆ ಕರೆ

ಪಾಕಿಸ್ತಾನದಿಂದ ಜೀವ ಬೆದರಿಗೆ ಕರೆಗಳು ಬರುತ್ತಿವೆ ಎಂದು ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದ್ರ ರೈನಾ ಅವರು ಗುರುವಾರ ಹೇಳಿದ್ದಾರೆ...

ಜಮ್ಮು; ಪಾಕಿಸ್ತಾನದಿಂದ ಜೀವ ಬೆದರಿಗೆ ಕರೆಗಳು ಬರುತ್ತಿವೆ ಎಂದು ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದ್ರ ರೈನಾ ಅವರು ಗುರುವಾರ ಹೇಳಿದ್ದಾರೆ. 
ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಅವರು, ಪಾಕಿಸ್ತಾನದಿಂದ ನನಗೆ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಬೆದರಿಕೆ ಕುರಿತಂತೆ ಭದ್ರತಾಧಿಕಾರಿಗಳಿಗೆ ಮಾಹಿತಿ ನೀಡಿದ್ದೇನೆಂದು ಹೇಳಿದ್ದಾರೆ. 
ಪಾಕಿಸ್ತಾನ ಹೇಡಿ ಜನರನ್ನು ಹೊಂದಿರುವ ರಾಷ್ಟ್ರವಾಗಿದೆ. ಪಾಕಿಸ್ತಾನದ ವಿರುದ್ಧ ಘೋಷಣೆ ಕೂಗಿದ್ದಕ್ಕಾಗಿ ಹಲವು ವರ್ಷಗಳಿಂದಲೂ ಲಾಹೋರ್, ಕರಾಚಿ, ರಾವಲ್ಪಿಂಡಿ ಮತ್ತು ಮುಜಾಫರಾಬಾದ್ ನಿಂದ ನನಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಇತ್ತೀಚೆಗಷ್ಟೇ ಮತ್ತೆ ಅದೇ ರೀತಿಯ ಕರೆಯೊಂದು ಬಂದಿತ್ತು. ಈ ಬಗ್ಗೆ ರಾಜ್ಯಪಾಲ ಎನ್ಎನ್ ವೋಹಾ ಸಹಿತ ಎಲ್ಲಾ ಸಂಬಂಧಿತರಿಗೆ ನಾನು ತಿಳಿಸಿದ್ದೇನೆ. ಜಮ್ಮುವಿನಲ್ಲಿ ಯೋಗ ದಿನಾಚರಣೆಯಲ್ಲಿ ಭಾಗಿಯಾದ ಬಳಿಕ ಕೂಡ ಕರಾಚಿಯಿಂದ ನನಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ತಿಳಿಸಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಕರೆ ಮಾಡಿದ್ದ ಉಗ್ರನೊಬ್ಬ, ಪತ್ರಕರ್ತ ಶುಜಾತ್ ಬುಖಾರಿ ಹತ್ಯೆಗೀಡಾದಂತೆ ನನ್ನನ್ನೂ ಹತ್ಯೆ ಮಾಡುವುದಾಗಿ ತಿಳಿಸಿದ್ದ ಎಂದಿದ್ದಾರೆ. 
ರಂಜಾನ್ ಮಾಸ ಅಂತಿಗೊಂಡ ಬಳಿಕ ಜಮ್ಮುಮತ್ತು ಕಾಶ್ಮೀರದಲ್ಲಿ ಕದನ ವಿರಾಮವನ್ನು ಅಂತಿಮಗೊಳಿಸಿ ಉಗ್ರರ ವಿರುದ್ಧ ಸೇನೆ ಕಾರ್ಯಾಚರಣೆಯನ್ನು ಆರಂಭಿಸಿದ್ದು, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿಯವರಲ್ಲಿ ಅಸಮಾಧಾನ ಮೂಡುವಂತೆ ಮಾಡಿತ್ತು. ಪರಿಣಾಮ ಸಾಕಷ್ಟು ರಾಜಕೀಯ ಬೆಳವಣಿಗೆಗಳ ಬಳಿಕ ಬಿಜೆಪಿಯು ಪಿಡಿಪಿ ಮೈತ್ರಿಕೂಟದಿಂದ ಹೊರಬಂದಿತ್ತು. ಇದೀಗ ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ಪತನಗೊಂಡು, ರಾಜ್ಯಪಾಲರ ಆಡಳಿತ ಜಾರಿಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ