ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ; 2 ಉಗ್ರರು ಹತ, ಓರ್ವ ಯೋಧ ಹುತಾತ್ಮ, 2 ನಾಗರೀಕರಿಗೆ ಗಾಯ

ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರಿಗೆ ದಿಟ್ಟ ಉತ್ತರ ನೀಡಿರುವ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ...

ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರಿಗೆ ದಿಟ್ಟ ಉತ್ತರ ನೀಡಿರುವ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ. 
ಅನಂತ್ ನಾಗ್ ಜಿಲ್ಲೆಯ ಖಿರಾಮ್ ಎಂಬ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಉಗ್ರರು ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಭದ್ರತಾ ಪಡೆಗಳು ಭಾರೀ ಕಾರ್ಯಾಚರಣೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. 
ಸ್ಥಳದಲ್ಲಿ ಅಡಗಿ ಕುಳಿತಿರುವ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಪ್ರಸ್ತುತ ಸ್ಥಳದ ಸುತ್ತಲೂ ಭದ್ರತಾ ಪಡೆಗಳು ಸುತ್ತುವರೆದಿದ್ದು, ಉಗ್ರರಿಗೆ ದಿಟ್ಟ ಉತ್ತರವನ್ನು ನೀಡುತ್ತಿದ್ದಾರೆ. ಇದರಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. 
ಉಗ್ರರ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಎಸ್.ಪಿ.ವೈದ್ ಅವರು, ಇಂದು ಬೆಳಿಗ್ಗೆ ಉಗ್ರರ ವಿರುದ್ಧ ಎನ್ ಕೌಂಟರ್ ನಡೆಸಲಾಗಿತ್ತು. ಸ್ಥಳದಲ್ಲಿ 3-4 ಉಗ್ರರಿರುವುದಾಗಿ ಮಾಹಿತಿಗಳು ತಿಳಿದುಬಂದಿದ್ದವು. ಪ್ರಸ್ತುತ ಇಬ್ಬರು ಉಗ್ರರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ದಾಳಿಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದು, ಇಬ್ಬರು ನಾಗರೀಕರಿಗೆ ಗಾಯಗಳಾಗಿವೆ ಎಂದು ಹೇಳಇದ್ದಾರೆ. 
ಸ್ಥಳಕ್ಕೆ ಹೆಚ್ಚುವರಿಯಾಗಿ ಮತ್ತಷ್ಟು ಭದ್ರತಾ ಪಡೆಗಳು ಆಗಮಿಸಿದ್ದು, ನಾಗರೀಕರಿಗೆ ಯಾವುದೇ ರೀತಿಯ ಅಪಾಯಗಳು ಎದುರಾಗದಂತೆ ಭದ್ರತೆಯನ್ನು ನೀಡುತ್ತಿದ್ದಾರೆ. 
ಈ ನಡುವೆ ವದಂತಿಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ಸರ್ಕಾರ, ಅನಂತ್ ನಾಗ್ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

India vs Afghanistan: ಅಭಿಷೇಕ್ ಅಬ್ಬರಕ್ಕೆ ಅಫ್ಘಾನ್ ಧೂಳೀಪಟ; 127 ರನ್‌ಗಳ ಭರ್ಜರಿ ಜಯ, T20 ಸರಣಿ ಕ್ಲೀನ್ ಸ್ವೀಪ್

'ಮೇಡಂ, ನಿಮ್ಮಂತ ಸುಂದರಿ ಯಾರೂ ಇಲ್ಲ'; ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, CM ಕೋಟಾದಡಿ IAS ಹುದ್ದೆ ಕೊಡಿಸ್ತೇನೆ!

Tata sons ಅಧ್ಯಕ್ಷರಾಗಿ ಚಂದ್ರಶೇಖರನ್ ಮರು ಆಯ್ಕೆ, IPO ಗೆ ಮತದಾನ ಕಾನೂನುಬಾಹಿರ- ಟಾಟಾ ಟ್ರಸ್ಟ್ಸ್ ತಗಾದೆ

ರಾಮ ಮಂದಿರ ತೀರ್ಪು ಬಂದಾಗ ಶಾರುಖ್, ಸಲ್ಮಾನ್, ಆಮಿರ್ ಖಾನ್ ಬಳಿ ಕ್ಷಮೆ ಕೇಳಿದ್ದೆ; ಹಿಂದೂವಾಗಿ ನನಗೆ ಅಸಹ್ಯವಾಗಿತ್ತು: ನಟಿ ಸ್ವರಾ ಭಾಸ್ಕರ್

India vs Afghanistan: ರೋಹಿತ್ ಶರ್ಮಾ ದಾಖಲೆ ಮುರಿದ ಅಭಿಷೇಕ್ ಶರ್ಮಾ; T20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ!