ವೀರಪ್ಪನ್ ಮಟ್ಟ ಹಾಕಿದ್ದ ಐಪಿಎಸ್ ಅಧಿಕಾರಿ ಈಗ ಕಾಶ್ಮೀರ ರಾಜ್ಯಪಾಲರ ಸಲಹೆಗಾರ!
ಕಾಡುಗಳ್ಳ ವೀರಪ್ಪನ್ ನನ್ನು ಮಟ್ಟ ಹಾಕಿದ್ದ ಮತ್ತು ನಕ್ಸಲ್ ನಿಗ್ರಹ ಕಾರ್ಯಾಚರಣೆಗಳ ತಜ್ಞ ನಿವೃತ್ತ ಐಪಿಎಸ್ ಅಧಿಕಾರಿ ವಿಜಯ್ ಕುಮಾರ್ ಅವರನ್ನು ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಎಂಎನ್ ವೋಹ್ರಾ ಅವರ ಸಲಹೆಗಾರರಾಗಿ ನೇಮಕ ಮಾಡಲಾಗಿದೆ.
ಶ್ರೀನಗರ: ಕಾಡುಗಳ್ಳ ವೀರಪ್ಪನ್ ನನ್ನು ಮಟ್ಟ ಹಾಕಿದ್ದ ಮತ್ತು ನಕ್ಸಲ್ ನಿಗ್ರಹ ಕಾರ್ಯಾಚರಣೆಗಳ ತಜ್ಞ ನಿವೃತ್ತ ಐಪಿಎಸ್ ಅಧಿಕಾರಿ ವಿಜಯ್ ಕುಮಾರ್ ಅವರನ್ನು ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಎಂಎನ್ ವೋಹ್ರಾ ಅವರ ಸಲಹೆಗಾರರಾಗಿ ನೇಮಕ ಮಾಡಲಾಗಿದೆ.
ಮಾಧ್ಯಮವೊಂದು ವರದಿ ಮಾಡಿರುವಂತೆ ವಿಜಯ್ ಕುಮಾರ್ ಅವರೊಂದಿಗೆ ಹಿರಿಯ ನಿವೃತ್ತ ಐಪಿಎಸ್ ಅಧಿಕಾರಿ ಬಿಬಿ ವ್ಯಾಸ್ ಅವರನ್ನೂ ಕೂಡ ನೇಮಕ ಮಾಡಲಾಗಿದೆ ಎಂದು ಹೇಳಲಾಗಿದೆ.
ಈ ಹಿಂದೆ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯ ಸರ್ಕಾರಗಳ ತಲೆನೋವಿಗೆ ಕಾರಣವಾಗಿದ್ದ ಕಾಡುಗಳ್ಳ ವೀರಪ್ಪನ್ ನನ್ನು ಇದೇ ವಿಜಯ್ ಕುಮಾರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಹೊಡೆದುರುಳಿಸಲಾಗಿತ್ತು. ಈ ಹಿಂದೆ ಬಿಎಸ್ ಎಫ್ ನಲ್ಲೂ ಸೇವೆ ಸಲ್ಲಿಸಿದ್ದರು. 1998 ರಿಂದ 2001ರವರೆಗೂ ವಿಜಯ್ ಕುಮಾರ್ ಅವರು ಬಿಎಸ್ ಎಫ್ ನ ಇನ್ಸ್ ಪೆಕ್ಟರ್ ಜನರಲ್ ಆಗಿ ಸೇವೆ ಸಲ್ಲಿಸಿದ್ದರು. ಇದಲ್ಲದೆ 2010ರಿಂದ 2012ರವರಗೂ ಸಿಆರ್ ಪಿಎಫ್ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.