ವಡೋದಾರಾ: ಶಾಲೆಯ ಶೌಚಾಗೃಹದಲ್ಲಿ ಬಾಲಕನ ಹತ್ಯೆ !
ಗುರ್ ಗಾಂವ್ ನಲ್ಲಿ ಕಳೆದ ವರ್ಷ ನಡೆದಿದ್ದ ರೆಯಾನ್ ಇಂಟರ್ ನ್ಯಾಷನಲ್ ಶಾಲಾ ಬಾಲಕ ಪ್ರದ್ಯುಮನ್ ಠಾಕೂರ್ ಹತ್ಯೆ ರೀತಿಯಲ್ಲೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
ವಡೋದಾರ: ಗುರ್ ಗಾಂವ್ ನಲ್ಲಿ ಕಳೆದ ವರ್ಷ ನಡೆದಿದ್ದ ರೆಯಾನ್ ಇಂಟರ್ ನ್ಯಾಷನಲ್ ಶಾಲಾ ಬಾಲಕ ಪ್ರದ್ಯುಮನ್ ಠಾಕೂರ್ ಹತ್ಯೆ ರೀತಿಯಲ್ಲೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
ಇಲ್ಲಿನ ಶಾಲೆಯೊಂದರ ಶೌಚಾಗೃಹದಲ್ಲಿ 9 ನೇ ತರಗತಿ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ಮೊದಲಿಗೆ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಲಾಗಿದ್ದು, ಬಳಿಕ ಚಾಕುವಿನಿಂದ ಇರಿದು ಕೊಲೆ ಮಾಡಿರುವಂತೆ ಕಂಡುಬಂದಿದೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ 10 ನೇ ತರಗತಿಯ ವಿದ್ಯಾರ್ಥಿ ಮೇಲೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಶಂಕಿತ ವಿದ್ಯಾರ್ಥಿ ನಿನ್ನೆ ಮೃತ ವಿದ್ಯಾರ್ಥಿ ಜೊತೆ ನೆ ವಾಗ್ವಾದ ನಡೆಸಿದ ಬಗ್ಗೆ ಪೊಲೀಸರಿಗೆ ಗೊತ್ತಾಗಿದೆ. ಆದರೆ, ಆತ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.