ಕಾಂಗ್ರೆಸ್ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ 
ದೇಶ

ಕಾಶ್ಮೀರದಲ್ಲಿ ಉಗ್ರರಿಗಿಂತ ಯೋಧರೇ ಹೆಚ್ಚು ಅಪಾಯಕಾರಿ: ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್

ಕಾಶ್ಮೀರದಲ್ಲಿ ಉಗ್ರರಿಗಿಂತ ಹೆಚ್ಚು ಪ್ರಮಾಣದಲ್ಲಿ ಯೋಧರೇ ಜನಸಾಮಾನ್ಯರನ್ನು ಹತ್ಯೆ ಮಾಡುತ್ತಿದ್ದಾರೆಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಅವರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ...

ನವದೆಹಲಿ: ಕಾಶ್ಮೀರದಲ್ಲಿ ಉಗ್ರರಿಗಿಂತ ಹೆಚ್ಚು ಪ್ರಮಾಣದಲ್ಲಿ ಯೋಧರೇ ಜನಸಾಮಾನ್ಯರನ್ನು ಹತ್ಯೆ ಮಾಡುತ್ತಿದ್ದಾರೆಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಅವರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. 
ಗುಲಾಂ ನಬಿ ಆಜಾದ್ ಅವರ ಈ ಹೇಳಿಕೆಯನ್ನು ಒಂದೆಡೆ ಕಾಂಗ್ರೆಸ್ ಸಮರ್ಥಿಸಿಕೊಳ್ಳುತ್ತಿದ್ದರೆ, ಮತ್ತೊಂದೆಡೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. 
ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಮಾತನಾಡಿರುವ ಗುಲಾಮ ನಬಿ ಆಜಾದ್ ಅವರು, ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಉಂಟಾಗುವ ಸಾವಿಗಿಂತಲೂ ಹೆಚ್ಚಾಗಿ ಸೇನಾ ಕಾರ್ಯಾಚರಣೆಯಿಂದಲೇ ಜನರು ಸಾವನ್ನಪ್ಪುತ್ತಿದ್ದಾರೆ. ಯೋಧರ ದಾಳಿ, ಉಗ್ರರಿಗಿಂತ ಹೆಚ್ಚಾಗಿ ಜನಸಾಮಾನ್ಯರನ್ನೇ ಗುರಿಯಾಗಿಸಿದೆ. ಉದಾಹರಣೆಗೆ ಪುಲ್ವಾಮಾದಲ್ಲಿ ಯೋಧರ ದಾಳಿಗೆ ಬಲಿಯಾಗಿದ್ದು, ಓರ್ವ ಉಗ್ರನಾಗಿದ್ದರೆ, ಅದೇ ವೇಳೆ 13 ಅಮಾಯಕ ನಾಗರೀಕರು ಸಾವನ್ನಪ್ಪಿದ್ದಾರೆಂದು ಹೇಳಿದ್ದಾರೆ. 
ಗುಲಾಂ ನಬಿ ಆಜಾದ್ ಅವರ ಈ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಭಾರತವನ್ನು ಛಿದ್ರ ಮಾಡುವ ಶಕ್ತಿಗಳಿಗೆ ಬೆಂಬಲ ನೀಡುವ ಹೊಸ ಶಕ್ತಿಯಾಗಿ ರಾಹುಲ್ ಗಾಂಧಿ ಅಧ್ಯಕ್ಷತೆಯ ಕಾಂಗ್ರೆಸ್ ಉದಯಿಸಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ವ್ಯಂಗ್ಯವಾಡಿದ್ದಾರೆ. 
ಈ ನಡುವೆ ಆಜಾದ್ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕಾಂಗ್ರೆಸ್, ರಾಜ್ಯದಲ್ಲಿ ನಾಗರೀಕರ ಸಾವಿನ ಸಂಖ್ಯೆ ಹೆಚ್ಚುತ್ತಿರುವುದರ ಬಗ್ಗೆ ಆಜಾದ್ ಅವರು ಕಳವಳ ವ್ಯಕ್ತಪಡಿಸಿದ್ದರಲ್ಲಿ ತಪ್ಪೇನು  ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್