ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಜಮ್ಮು-ಕಾಶ್ಮೀರದ ಕುಲ್ ಗಾಮ್ ಬಳಿ ಎನ್ ಕೌಂಟರ್: ಇಬ್ಬರು ಎಲ್ ಇಟಿ ಉಗ್ರರ ಹತ್ಯೆ

ದಕ್ಷಿಣ ಕಾಶ್ಮೀರದ ಕುಲ್ ಗಾಮ್ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಲಷ್ಕರ್ ಇ- ತೊಯ್ಬಾ ಸಂಘಟನೆಗೆ ಸೇರಿದ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯ ಚಿತ್ರ
Nagaraja AB
Updated On : 24 Jun 2018, 4:21 am

ಶ್ರೀನಗರ : ದಕ್ಷಿಣ ಕಾಶ್ಮೀರದ ಕುಲ್ ಗಾಮ್ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಲಷ್ಕರ್ ಇ- ತೊಯ್ಬಾ ಸಂಘಟನೆಗೆ ಸೇರಿದ ಇಬ್ಬರು  ಉಗ್ರರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೇನೆ ಹಾಗೂ ಸಿಆರ್ ಪಿಎಫ್  ಜೊತೆಗೂಡಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಧ್ಯಾಹ್ನ ಕುಲ್ ಗಾಮ್ ಬಳಿಯ ಹಳ್ಳಿಯೊಂದರಲ್ಲಿ ಈ ಎನ್ ಕೌಂಟರ್ ನಡೆಸಲಾಗಿದೆ.

  ಜೂನ್. 28 ರಿಂದ ಆರಂಭವಾಗಲಿರುವ ಅಮರಾನಾಥ ಯಾತ್ರೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ತೆರವುಗೊಳಿಸಲಾಗಿದ್ದು, ಅಲ್ಲಿ ಎನ್ ಕೌಂಟರ್ ಕಾರ್ಯಾಚರಣೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಎನ್ ಕೌಂಟರ್ ಪ್ರಗತಿಯಲ್ಲಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement