ಜಮ್ಮು; ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಯೋಧ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆಂದು ಸೋಮವಾರ ತಿಳಿದುಬಂದಿದೆ.
ಸಿಪಾಯಿ ನೀರಜ್ ಕುಮಾರ್ (38) ಅವರ ಮೃತದೇಹ ರಜೌರಿ ಜಿಲ್ಲೆಯಲ್ಲಿ ಪತ್ತೆಯಾಗಿದೆ. ಉತ್ತರಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೀರಜ್ ಅವರು ಕೆಲ ದಿನಗಳ ಹಿಂದಷ್ಟೇ ಹುಟ್ಟೂರು ರಜೌರಿಗೆ ಬಂದಿದ್ದರು.
ರಜೌರಿಯ ಸಲಾರಿ ಪಥಲ್ ಎಂಬ ಗ್ರಾಮದ ಸುಂದರ್ ಬನಿ ಎಂಬ ಪ್ರದೇಶದಲ್ಲಿ ಯೋಧನ ಮೃತದೇಹ ಅನುಮಾನಾಸ್ಪದವಾಗಿ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಯೋಧನ ಸಾವಿಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ, ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಅಂತಿಮ ಸಂಸ್ಕಾರಕ್ಕಾಗಿ ಯೋಧನ ಪಾರ್ಥೀವ ಶರೀರವನ್ನು ಕುಟುಂಬಸ್ಥರ ವಶಕ್ಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.