ಕೇಜ್ರಿವಾಲ್ 
ದೇಶ

ಬೆಂಗಳೂರಿನಿಂದ ದೆಹಲಿಗೆ ವಾಪಸ್ಸಾಗಿ ಕೆಲಸ ಮಾಡಿ: ದೆಹೆಲಿ ಸಿಎಂ ಕೇಜ್ರಿವಾಲ್ ಗೆ ಬಿಜೆಪಿ ನಾಯಕನ ಪತ್ರ

ಬೆಂಗಳೂರಿನಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಪತ್ರ ಬರೆದಿದ್ದು ಬೆಂಗಳೂರಿನಿಂದ ದೆಹಲಿಗೆ ವಾಪಸ್ಸಾಗಿ ಕೆಲಸದಲ್ಲಿ ತೊಡಗುವಂತೆ

ನವದೆಹಲಿ: ಬೆಂಗಳೂರಿನಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಪತ್ರ ಬರೆದಿದ್ದು ಬೆಂಗಳೂರಿನಿಂದ ದೆಹಲಿಗೆ ವಾಪಸ್ಸಾಗಿ ಕೆಲಸದಲ್ಲಿ ತೊಡಗುವಂತೆ ಒತ್ತಾಯಿಸಿದ್ದಾರೆ. 
ಮುಂಗಾರು ಪ್ರಾರಂಭವಾಗಲಿದ್ದು ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಆದ್ದರಿಂದ ದೆಹಲಿ ಮುಖ್ಯಮಂತ್ರಿಗಳು ಬೆಂಗಳೂರಿನಿಂದ ದೆಹಲಿಗೆ ವಾಪಸ್ಸಾಗಿ ಕೆಲಸದಲ್ಲಿ ತೊಡಗಬೇಕೆಂದು ಹೇಳಿದ್ದಾರೆ.  ವೈದ್ಯರು ಕೇಜ್ರಿವಾಲ್ ಆರೋಗ್ಯವಾಗಿದ್ದಾರೆ ಎಂದು ಹೇಳಿರುವ ಬಗ್ಗೆ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿರುವ ಮನೋಜ್ ತಿವಾರಿ,  "ನೀವು ಆರೋಗ್ಯವಾಗಿದ್ದೀರಿ ಎಂದು ವೈದ್ಯರು ದೃಢೀಕರಿಸಿದ್ದಾರೆ. ಆದ್ದರಿಂದ ಸಾಧ್ಯವಾದಷ್ಟೂ ಶೀಘ್ರವೇ ದೆಹಲಿಗೆ ಆಗಮಿಸಿ ಕೆಲಸದಲ್ಲಿ ತೊಡಗಬೇಕೆಂದು ಆಗ್ರಹಿಸಿದ್ದಾರೆ. 
ಮುಂಗಾರು ಪ್ರಾರಂಭವಾಗಲಿದ್ದು ಚರಂಡಿಗಳ ಸಮಸ್ಯೆಗಳನ್ನು ಬಗೆಹರಿಸಬೇಕಿದೆ, ಅಷ್ಟೇ ಅಲ್ಲದೇ ವಾಯುಮಾಲಿನ್ಯ, ವಿದ್ಯುತ್ ಕಡಿತ ಸೇರಿದಂತೆ ದೆಹಲಿಯ ಜನತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಅವುಗಳನ್ನು ಶೀಘ್ರವೇ ಬಗೆಹರಿಸಬೇಕೆಂದು ಮನೋಜ್ ತಿವಾರಿ ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT