ಸ್ಟೋಟ ಸಂಭವಿಸಿದ ಸ್ಥಳದಲ್ಲಿ ಪೊಲೀಸರ ಪರಿಶೀಲನೆ 
ದೇಶ

ಉತ್ತರ ಪ್ರದೇಶ : ಮುಜಾಫರ್ ನಗರದ ಗುಜರಿ ಅಂಗಡಿ ಬಳಿ ಸ್ಫೋಟ - ನಾಲ್ವರು ಸಾವು

ಉತ್ತರ ಪ್ರದೇಶ ರಾಜ್ಯದ ಮುಜಾಫರ್ ನಗರದ ಗುಜರಿ ಅಂಗಡಿ ಬಳಿ ಇಂದು ಮಧ್ಯಾಹ್ನ ಸ್ಪೋಟ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.

ಮುಜಾಫರ್ ನಗರ : ಉತ್ತರ ಪ್ರದೇಶ ರಾಜ್ಯದ  ಮುಜಾಫರ್ ನಗರದ ಗುಜರಿ ಅಂಗಡಿ ಬಳಿ  ಇಂದು ಮಧ್ಯಾಹ್ನ ಸ್ಪೋಟ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.

ಸಿವಿಲ್ ಲೈನ್ ಪೊಲೀಸ್ ಠಾಣೆ ಪ್ರದೇಶದ  ಸರ್ವತ್  ರಸ್ತೆಯಲ್ಲಿ ಈ ಘಟನೆ ನಡೆದಿದೆ.  ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರೀಯ ದಳ ಹಾಗೂ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಭಯೋತ್ಪಾದನೆ ನಿಗ್ರಹ ದಳ ಹಾಗೂ ಮೀರತ್ ನಿಂದ ಆಗಮಿಸಿರುವ ಸೇನಾ ತಂಡ ಸ್ಪೋಟ ಸಂಭವಿಸಿದ ಪ್ರದೇಶದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸ್ಪೋಟಕ್ಕೆ ಕಾರಣ ಏನೆಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನಂತದೇವ್ ತಿವಾರಿ ತಿಳಿಸಿದ್ದಾರೆ.

ಗುಜರಿ ಅಂಗಡಿಯಲ್ಲಿನ ವಸ್ತುಗಳನ್ನು ವಿಲೇವಾರಿ ಮಾಡುತ್ತಿದ್ದಾಗ ಸ್ಪೋಟ ಸಂಭವಿಸಿದ್ದು,  50 ವರ್ಷದ ತಾಜಿಮ್, 55 ವರ್ಷದ ಶಾಜಾದ್  ಸೇರಿದಂತೆ ನಾಲ್ಕು ಮಂದಿ ಮೃತಪಟ್ಟಿದ್ದಾರೆ.  ಮೂವರು ದಾರಿಹೋಕರರು  ಗಾಯಗೊಂಡಿದ್ದಾರೆ ಎಂದು  ವೃತ್ತ  ಅಧಿಕಾರಿ ಹರೀಶ್  ಬಾಂಡೊರಿಯಾ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!