ಎಂಎಸ್ಎಂಇ ಕ್ಷೇತ್ರಕ್ಕೆ ಶೀಘ್ರವೇ ಉದ್ಯೋಗ ಪೋರ್ಟಲ್
ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಕ್ಷೇತ್ರಕ್ಕೆ ಸಂಬಂಧಿಸಿದ ಉದ್ಯೋಗ ಪೋರ್ಟಲ್ ಶೀಘ್ರವೇ ಲೋಕಾರ್ಪಣೆಗೊಳ್ಳಲಿದೆ.
ನವದೆಹಲಿ: ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಕ್ಷೇತ್ರಕ್ಕೆ ಸಂಬಂಧಿಸಿದ ಉದ್ಯೋಗ ಪೋರ್ಟಲ್ ಶೀಘ್ರವೇ ಲೋಕಾರ್ಪಣೆಗೊಳ್ಳಲಿದೆ.
ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದಕ್ಕಾಗಿ ಕೇಂದ್ರ ಸರ್ಕಾರ ಉದ್ಯೋಗ ಪೋರ್ಟಲ್ ನ್ನು ಪ್ರಾರಂಭಿಸಲಿದೆ. ಜೂ.27 ರಂದು ರಾಷ್ಟ್ರೀಯ ಎಂಎಸ್ಎಂಇ ಕಾನ್ಕ್ಲೇವ್ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ವೆಬ್ ಸೈಟ್ ನ್ನು ಲೋಕಾರ್ಪಣೆ ಮಾಡಲಾಗುತ್ತದೆ. ಪ್ರತಿಭೆಗಳನ್ನು ಅನ್ವೇಷಿಸಲು ಹಾಗೂ ಸರಿಯಾದ ಅವಕಾಶಗಳನ್ನು ಒದಗಿಸಲು ಈ ವೆಬ್ ಸೈಟ್ ನ್ನು ಪ್ರಾರಂಭಿಸಲಾಗುತ್ತಿದೆ. ಈ ವರೆಗೂ 4.40 ಲಕ್ಷ ಜನರು ವೆಬ್ ಸೈಟ್ ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಎಂಎಸ್ಎಂಇ ಕಾರ್ಯದರ್ಶಿ ಅರುಣ್ ಕುಮಾರ್ ಪಾಂಡ ಹೇಳಿದ್ದಾರೆ.
ಈ ವರೆಗೂ 2,400 ಸಂಸ್ಥೆಗಳು ನಮ್ಮೊಂದಿಗೆ ನೋಂದಣಿ ಮಾಡಿಕೊಂಡಿವೆ, ಅಧಿಕೃತವಾಗಿ ವೆಬ್ ಸೈಟ್ ಲೋಕಾರ್ಪಣೆಗೊಂಡ ಬಳಿಕ, ಈ ಸಂಖ್ಯೆ ಇನ್ನೂ ಹೆಚ್ಚಾಗಲಿದೆ, ತರಬೇತಿ ನೀಡಲು ಈಗಿರುವ 18 ಕೇಂದ್ರಗಳ ಜೊತೆಗೆ ಇನ್ನೂ 15 ಕೇಂದ್ರಗಳು ಪ್ರಾರಂಭವಾಗಲಿವೆ ಎಂದು ಅರುಣ್ ಕುಮಾರ್ ಪಾಂಡ ಮಾಹಿತಿ ನೀಡಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.