ನರೇಂದ್ರ ಮೋದಿ 
ದೇಶ

ಗಾಂಧಿ ಕುಟುಂಬದ ಸ್ವಹಿತಾಸಕ್ತಿಗಾಗಿ ಭಾರತವನ್ನು ಜೈಲಾಗಿ ಪರಿವರ್ತಿಸಲಾಗಿತ್ತು: ಪ್ರಧಾನಿ ಮೋದಿ

ಕಾಂಗ್ರೆಸ್ ಮತ್ತು ಗಾಂಧಿ ಕುಟುಂಬದ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು,...

ಮುಂಬೈ: ಕಾಂಗ್ರೆಸ್ ಮತ್ತು ಗಾಂಧಿ ಕುಟುಂಬದ ವಿರುದ್ಧ  ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಗಾಂಧಿ ಕುಟುಂಬದ ಸ್ವಾರ್ಥ ವೈಯಕ್ತಿಕ ಸ್ವಹಿತಾಸಕ್ತಿಗಾಗಿ ಭಾರತವನ್ನು ಜೈಲಾಗಿ ಪರಿವರ್ತಿಸಲಾಗಿತ್ತು ಎಂದು ಆರೋಪಿಸಿದ್ದಾರೆ.
ಇಂದು ಮುಂಬೈನಲ್ಲಿ ಬಿಜೆಪಿ ಆಯೋಜಿಸಿದ್ದ ತುರ್ತುಪರಿಸ್ಥಿತಿಯ 43ನೇ ಕರಾಳ ದಿನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ,  ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರು ಹೇರಿದ್ದ 1975ರ ತುರ್ತುಪರಿಸ್ಥಿತಿಯ ವಾರ್ಷಿಕೋತ್ಸವವನ್ನುಬಿಜೆಪಿ ಕರಾಳದಿನವನ್ನಾಗಿ ಆಚರಿಸುತ್ತಿರುವುದು ಕೇವಲ ಕಾಂಗ್ರೆಸ್ ಪಕ್ಷವನ್ನುಟೀಕಿಸುವುದಕ್ಕಲ್ಲ. ಬದಲಿಗೆ ಯುವ ಜನರಲ್ಲಿ ಅಂದಿನ ದಿನ ನಿಜಕ್ಕೂ ಏನಾಗಿತ್ತು ಎಂಬುದರ ಅರಿವು ಮೂಡಿಸಲು ಎಂದು ಹೇಳಿದರು.
ತುರ್ತುಪರಿಸ್ಥಿತಿಯ ಆ ದಿನಗಳಲ್ಲಿ ಏನು ನಡೆದಿತ್ತು ಎಂಬುದರ ಬಗ್ಗೆ ಇಂದಿನ ಯುವಕರಿಗೆ ಅರಿವು ಇಲ್ಲ. ಆಗ ಜನ ಸ್ವಾತಂತ್ರ್ಯವಿಲ್ಲದೆ ಹೇಗೆ ಇದ್ದರು ಎಂಬುದೂ ಗೊತ್ತಿಲ್ಲ. ಕಾಂಗ್ರೆಸ್​ ಅಂದು ಹೇರಿದ್ದ ತುರ್ತು ಪರಿಸ್ಥಿತಿ ಪ್ರಜಾಪ್ರಭುತ್ವಕ್ಕೆ ಮಾರಕವಾಗಿ ಪರಿಣಮಿಸಿದೆ. ಇದೊಂದು ಪಾಪದ ಕೆಲಸ. ಸಂವಿಧಾನದ ದುರ್ಬಳಕೆ ಮಾಡಿಕೊಂಡ ದಿನ ಇದು ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ಅನ್ನು ಕಟುವಾಗಿ ಟೀಕಿಸಿದರು.
ನಮ್ಮ ಈ ಕಾರ್ಯಕ್ರಮದ ಮೂಲಕ ಅವತ್ತಿನ ತುರ್ತುಪರಿಸ್ಥಿತಿಯನ್ನು ವಿರೋಧಿಸಿ ಪ್ರಜಾಪ್ರಭುತ್ವದ ಮೌಲ್ಯ ಎತ್ತಿ ಹಿಡಿದವರಿಗೆ ಕೃತಜ್ಞತೆ ಸಲ್ಲಿಸಲಾಗುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ​ನಲ್ಲಿ ಆಂತರಿಕವಾಗಿಯೇ ಒಂದು ಪ್ರಜಾಪ್ರಭುತ್ವ ವ್ಯವಸ್ಥೆ ಇಲ್ಲ. ಅಂದ ಮೇಲೆ ದೇಶದ ಪ್ರಜಾಪ್ರಭುತ್ವ ರಕ್ಷಣೆ ಮಾಡುತ್ತದೆ ಎಂದು ಹೇಗೆ ನಿರೀಕ್ಷಿಸುವುದು? ಎಂದು ಪ್ರಧಾನಿ ಪ್ರಶ್ನಿಸಿದರು.
ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಗಾಯಕ ಕಿಶೋರ್​ ಕುಮಾರ್​ ಅವರು ಕಾಂಗ್ರೆಸ್​ ಪರವಾಗಿ ಹಾಡಲು ನಿರಾಕರಿಸಿದ್ದಕ್ಕೆ ಅವರ ಹಾಡುಗಳನ್ನು ದೇಶಾದ್ಯಂತ ನಿರ್ಬಂಧಿಸಲಾಯಿತು ಎಂದರು.
ಹಿರಿಯ ಪತ್ರಕರ್ತರಾದ ಕುಲದೀಪ್​ ನೈಯರ್ ಅವರು ತುರ್ತು ಪರಿಸ್ಥಿತಿಯನ್ನು ಬಲವಾಗಿ ವಿರೋಧಿಸಿದವರಲ್ಲಿ ಒಬ್ಬರು. ನಮ್ಮೆಲ್ಲರನ್ನೂ ಟೀಕಿಸಿದ್ದಾರೆ. ಆದರೆ, ನಾನು ಈ ಸಮಯದಲ್ಲಿ ಅವರಿಗೆ ವಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಸ್ವಾರ್ಥ ಹಿತಾಸಕ್ತಿಗಾಗಿ ಕಾಂಗ್ರೆಸ್ ದೇಶವನ್ನು ಒಂದು ಜೈಲಾಗಿ ಪರಿವರ್ತಿಸಿತ್ತು. ಪ್ರತಿಪಕ್ಷಗಳ ನಾಯಕರನ್ನು ಜೈಲಿಗೆ ಕಳುಹಿಸಿದ್ದರು. ಅವರಿಗೆ ದೇಶ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಗೌರವ ಇಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!