ದೇಶ

ತುರ್ತು ಪರಿಸ್ಥಿತಿಗಿಂತಲೂ ಈಗಿರುವ ಪರಿಸ್ಥಿತಿ ಹೆಚ್ಚು ಅಪಾಯಕಾರಿ: ಯಶವಂತ್ ಸಿನ್ಹಾ

Manjula VN
ವಾರಣಾಸಿ; 1975ರ ತುರ್ತು ಪರಿಸ್ಥಿತಿಗಿಂದಲೂ ಇಂದು ದೇಶದಲ್ಲಿರುವ ಅಘೋಷಿತ ತುರ್ತು ಪರಿಸ್ಥಿತಿಯೇ ಹೆಚ್ಚು ಅಪಾಯಕಾರಿಯಾದದ್ದು ಎಂದು ಮಾಜಿ ಬಿಜೆಪಿ ನಾಯ ಯಶವಂತ್ ಸಿನ್ಹಾ ಅವರು ಮಂಗಳವಾರ ಹೇಳಿದ್ದಾರೆ. 
ಆಮ್ ಆದ್ಮಿ ಪಕ್ಷದ ರ್ಯಾಲಿ ಕುರಿತಂತೆ ಫೋನ್ ನಲ್ಲಿ ಮಾತನಾಡಿರುವ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಿರ್ದೇಶಕರಾಗಿರುವ ಅಹಮದಾಬಾದ್ ಜಿಲ್ಲಾ ಸಹಕಾರ ಬ್ಯಾಂಕಿನಲ್ಲಿ (ಎಡಿಸಿಬಿ) ರೂ.745.59 ಕೋಟಿ ಮೌಲ್ಯದ ಹಳೆ ನೋಟು ಠೇವಣಿ ಸ್ವೀಕರಿಸಿರುವ ಕುರಿತಂತೆ ಸರ್ಕಾರ ಈವರೆಗೂ ಯಾವುದೇ ರೀತಿಯ ತನಿಖೆಗೆ ಆದೇಶಿಸಿಲ್ಲ ಎಂದು ಹೇಳಿದ್ದಾರೆ. 
1975ರಲ್ಲಿ ಇಂದಿರಾ ಗಾಂಧಿ ಸರ್ಕಾರ ಘೋಷಣೆಮಾಡಿದ್ದ ತುರ್ತು ಪರಿಸ್ಥಿತಿಗಿಂತಲೂ ಇಂದು ದೇಶದಲ್ಲಿರುವ ಅಘೋಷಿತ ತುರ್ತು ಪರಿಸ್ಥಿತಿಯೇ ಅತ್ಯಂತ ಹೆಚ್ಚು ಅಪಾಯಕಾರಿಯಾಗಿದೆ ಎಂದು ಹೇಳಿದ್ದಾರೆ. 
ದೇಶದಲ್ಲಿಂದು ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಸಂವಿಧಾನವನ್ನು ಹಾಸ್ಯಸ್ಪದವನ್ನಾಗಿ ಮಾಡಲಾಗಿದೆ. ಸರ್ಕಾರದ ಎಲ್ಲಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಎಲ್ಲವೂ ಬಿಜೆಪಿ ನಿರ್ದೇಶನದಂತೆಯೇ ನಡೆಯುತ್ತಿದೆ. ಇತರರ ವಿರುದ್ಧ ತನಿಖೆಗೆ ಆದೇಶಿಸುವ ಸರ್ಕಾರ, ಸರ್ಕಾರದಲ್ಲಿ ಉನ್ನತ ಮಟ್ಟದಲ್ಲಿರುವ ಅಧಿಕಾರಿಗಳ ವಿರುದ್ಧ ಮಾತ್ರ ತನಿಖೆಗೆ ಆದೇಶಿಸುತ್ತಿಲ್ಲ. ಬಿಜೆಪಿ ರಾಷ್ಟ್ರಾಧ್ಯಕ್ಷ ಬ್ಯಾಂಕ್ ವೊಂದರ ನಿರ್ದೇಶಕರಾಗಿದ್ದಾರೆ. ನೋಟು ನಿಷೇಧವಾದ ಬ್ಯಾಂಕ್ ನಲ್ಲಿ ರೂ.745.59 ಕೋಟಿ ಮೌಲ್ಯದ ಹಳೆ ನೋಟು ಠೇವಣಿಯಾಗಿದ್ದು, ಇದರ ಬಗ್ಗೆ ಯಾರು ತನಿಖೆಗೆ ಆದೇಶಿಸುತ್ತಾರೆ?...
ದೇಶದಲ್ಲಿಂದು ಪ್ರಜಾಪ್ರಭುತ್ವ ಅಪಾಯದಲ್ಲಿದ್ದು, ಸರ್ಕಾರಿ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ, ಕೇಂದ್ರ ತನಿಖಾ ಸಂಸ್ಥೆ, ಆದಾಯ ತೆರಿಗೆ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. 
ಇದೇ ವೇಳೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು ಮಾಡಿದ್ದ ಆರೋಪವನ್ನು ಪ್ರಸ್ತಾಪಿಸಿರುವ ಅವರು, ನ್ಯಾಯಾಂಗ ವ್ಯವಸ್ಥೆಯಲ್ಲಿ ಎಲ್ಲವೂ ಸರಿಯಿಲ್ಲ ಎಂದು ನ್ಯಾಯಮೂರ್ತಿಗಳೇ ಹೇಳಿದ್ದರು ಎಂದಿದ್ದಾರೆ. 
ಜನರು ಅಘೋಷಿತ ತುರ್ತು ಪರಿಸ್ಥಿತಿ ವಿರುದ್ದ ಬೀದಿಗಿಳು ಪ್ರತಿಭಟನೆ ನಡೆಸಬೇಕು ಎಂದು ಹೇಳಿದ್ದಾರೆ. 
SCROLL FOR NEXT