ಜಮ್ಮುವಿಗೆ ವಿಶೇಷ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 10 ಬಿಎಸ್ಎಫ್ ಯೋಧರು ನಾಪತ್ತೆ, ಆತಂಕ ಸೃಷ್ಠಿ!
ವಿಶೇಷ ರೈಲಿನಲ್ಲಿ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಯಾಣಿಸುತ್ತಿದ್ದ ಹತ್ತು ಬಿಎಸ್ಎಫ್ ಯೋಧರು ನಾಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ...
ಮುಘಲ್ ಸರಾಯ್(ಉತ್ತರಪ್ರದೇಶ): ವಿಶೇಷ ರೈಲಿನಲ್ಲಿ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಯಾಣಿಸುತ್ತಿದ್ದ ಹತ್ತು ಬಿಎಸ್ಎಫ್ ಯೋಧರು ನಾಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ.
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ ನತ್ತ ಸೇನಾ ರೈಲಿನಲ್ಲಿ ಪಶ್ಚಿಮ ಬಂಗಾಳದ ಬರ್ದಮಾನ್ ಮತ್ತು ಜಾರ್ಖಂಡ್ ಧಾನಬಾದ್ ನಿಂದ ಯೋಧರ ತಂಡ ಪ್ರಯಾಣಿಸುತ್ತಿದ್ದರು.
ಈ ಬಗ್ಗೆ ರೈಲ್ವೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಸೇನಾ ಯೋಧರು ರಜೆ ಪಡೆಯದೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ ಎಂದು ದಾಖಲಿಸಿರುವ ಬಗ್ಗೆ ವರದಿಯಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.