ಸಾಂದರ್ಭಿಕ ಚಿತ್ರ 
ದೇಶ

ಮೋದಿ ಸರ್ಕಾರ ಸರ್ಜಿಕಲ್ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ: ಕಾಂಗ್ರೆಸ್ ಆರೋಪ

2016 ರಲ್ಲಿ ನಡೆದ ಸರ್ಜಿಕಲ್ ದಾಳಿಯನ್ನು ಕೇಂದ್ರ ಸರ್ಕಾರ ಮತ್ತು ಬಿಜೆಪಿ ರಾಜಕೀಯಕರಣಗೊಳಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ...

ನವದೆಹಲಿ: 2016 ರಲ್ಲಿ ನಡೆದ ಸರ್ಜಿಕಲ್ ದಾಳಿಯನ್ನು ಕೇಂದ್ರ ಸರ್ಕಾರ ಮತ್ತು ಬಿಜೆಪಿ ರಾಜಕೀಯಕರಣಗೊಳಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ದೇಶಕ್ಕಾಗಿ ಸೈನಿಕರು ತಮ್ಮ ರಕ್ತ ಹಾಗೂ ಪ್ರಾಣ ಬಲಿದಾನ ಮಾಡಿದ್ದಾರೆ,  ಇದನ್ನು ಬಿಜೆಪಿ ರಾಜಕೀಯಗೊಳಿಸಬಾರದು ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಆಗ್ರಹಿಸಿದ್ದಾರೆ. 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಜಿಕಲ್ ದಾಳಿಯಲ್ಲಿ  ಯೋಧರು ದೇಶಕ್ಕಾಗಿ ತಮ್ಮ ಬಲಿದಾನ ಮಾಡಿದ್ದಾರೆ, ಇದನ್ನು ಮತಗಳಿಕೆಗೆ ಬಳಸಬಾರದು, ಪ್ರಧಾನಿ ಮೋದಿ ವೈಭವೀಕರಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಯಾವಾಗ ಮೋದಿ ಸರ್ಕಾರ ವಿಫಲವಾಗುವುದೋ, ಅಮಿತ್ ಶಾ ಸೋಲು ಪ್ರಾರಂಭವಾಗುವುದೋ ಹಾಗೆಲ್ಲಾ ಬಿಜೆಪಿ ಸೇನೆಯ ಶೌರ್ಯವನ್ನು ದುರ್ಬಳಕೆ ಮಾಡಿಕೊಳ್ಳುತ್ತದೆ ಎಂಬುದನ್ನು ಜನ ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ,. ಅಟಲ್ ಬಿಹಾರ ವಾಜಪೇಯಿ ಮತ್ತು ಮನಮೋಹನ್ ಸಿಂಗ್ ಅವರ ಆಡಳಿತಾವಧಿಯಲ್ಲೂ ಸರ್ಜಿಕಲ್ ದಾಳಿ ನಡೆದಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಭದ್ರಕೋಟೆ ಮುರಿಯಲು BJP-JDS ರಣತಂತ್ರ; HDK ನೇತೃತ್ವದಲ್ಲಿ ಮಹತ್ವದ ಸಭೆ..!

ಮಲೆನಾಡು, ಕರಾವಳಿ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಆದ್ಯತೆ: ಕೇಂದ್ರ ಸಚಿವ ವಿ. ಸೋಮಣ್ಣ