ಹೆಚ್ ಡಿ ದೇವೇಗೌಡ 
ದೇಶ

ಹೆಚ್ ಡಿಕೆ ಪ್ರಮಾಣವಚನದಲ್ಲಿದ್ದ ನಾಯಕರು 2019ರಲ್ಲಿ ಒಟ್ಟಿಗೆ ಇರುತ್ತಾರೆ ಎಂಬ ಖಾತ್ರಿ ಇಲ್ಲ: ದೇವೇಗೌಡ

ಹೆಚ್ ಡಿ ಕುಮಾರಸ್ವಾಮಿ ಪದಗ್ರಹಣದ ವೇಳೆ ವಿಧಾನಸೌಧದದಲ್ಲಿ ಬಿಜೆಪಿಯೇತರ ಪಕ್ಷಗಳ ನಾಯಕರ ಒಗ್ಗಟ್ಟು ಪ್ರದರ್ಶನ 2019 ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿತ್ತು.

ನವದೆಹಲಿ: ಹೆಚ್ ಡಿ ಕುಮಾರಸ್ವಾಮಿ ಪದಗ್ರಹಣದ ವೇಳೆ ವಿಧಾನಸೌಧದದಲ್ಲಿ ಬಿಜೆಪಿಯೇತರ ಪಕ್ಷಗಳ ನಾಯಕರ ಒಗ್ಗಟ್ಟು ಪ್ರದರ್ಶನ  2019 ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿತ್ತು. ಆದರೆ  ಆ ಒಗ್ಗಟ್ಟು ಮುಂದುವರೆಯುವ ಬಗ್ಗೆ ಈಗ ಸ್ವತಃ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರಿಗೇ ಅನುಮಾನವಿದ್ದಂತಿದೆ. 
6 ಬಿಜೆಪಿಯೇತರ ಪಕ್ಷಗಳ ನಾಯಕರು ಹೆಚ್ ಡಿಕೆ ಪ್ರಮಾಣವಚನ ಕಾರ್ಯಕ್ರಮದ ವೇಳೆ ಒಗ್ಗಟ್ಟು ಪ್ರದರ್ಶನ ಮಾಡಿದ್ದರೆಂಬ ಮಾತ್ರಕ್ಕೆ  2019 ರ ಚುನಾವಣೆಯಲ್ಲಿ ಒಟ್ಟಿಗೆ ಸ್ಪರ್ಧಿಸುತ್ತಾರೆ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ ಎಂದು ದೆಹಲಿಯಲ್ಲಿ ದೇವೇಗೌಡ ತಿಳಿಸಿದ್ದಾರೆ. 
ಬಿಜೆಪಿಯನ್ನು ಎದುರಿಸುವುದಕ್ಕೆ ತೃತೀಯ ರಂಗದ ಅಗತ್ಯವಿದೆ ಎಂದು ಹೇಳಿರುವ ದೇವೇಗೌಡರು, ಪ್ರಧಾನಿ ನರೇಂದ್ರ ಮೋದಿಯಿಂದ ಕಾರ್ಯಕರ್ತರಿಗೆ ಲೋಕಸಭಾ ಚುನಾವಣೆ ಅವಧಿಗೂ ಮುನ್ನವೇ ಸಿದ್ಧರಾಗಿರಿ ಎಂಬ ಸಂದೇಶ ರವಾನೆಯಾಗಿದೆ ಎಂದು ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ. 
ಬಿಎಸ್ ಪಿ ಹಾಗೂ ಸಮಾಜವಾದಿ ಪಕ್ಷ ಉತ್ತರ ಪ್ರದೇಶದಲ್ಲಿ ತಲಾ 40 ಸ್ಥಾನಗಳನ್ನು ಹಂಚಿಕೊಳ್ಳುವುದಕ್ಕೆ ಚರ್ಚೆ ನಡೆಸುತ್ತಿದ್ದಾರೆ.  ಕರ್ನಾಟಕದಲ್ಲಿ ನಾವು ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಸಹ ಕಾಂಗ್ರೆಸ್ ಜೊತೆ ಚುನಾವಣೆ ಎದುರಿಸುತ್ತೇವೆ ಎಂದು ದೇವೇಗೌಡ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!