ಜಮ್ಮು-ಕಾಶ್ಮೀರ: ಕಟ್ಟಡದಲ್ಲಿ ಅಡಗಿ ಕುಳಿತಿರುವ ಉಗ್ರರು, ಪುಲ್ವಾಮದಲ್ಲಿ ಕಾರ್ಯಾಚರಣೆಗಿಳಿದ ಸೇನಾಪಡೆ 
ದೇಶ

ಜಮ್ಮು-ಕಾಶ್ಮೀರ: ಕಟ್ಟಡದಲ್ಲಿ ಅಡಗಿ ಕುಳಿತಿರುವ ಉಗ್ರರು, ಪುಲ್ವಾಮದಲ್ಲಿ ಕಾರ್ಯಾಚರಣೆಗಿಳಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿರುವ ಕಟ್ಟಡವೊಂದರಲ್ಲಿ ಉಗ್ರರು ಅಡಗಿ ಕುಳಿತಿದ್ದು, ಉಗ್ರರನ್ನು ಸದೆಬಡಿಯಲು ಭಾರತೀಯ ಸೇನಾಪಡೆ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಶುಕ್ರವಾರ ತಿಳಿದುಬಂದಿದೆ...

ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿರುವ ಕಟ್ಟಡವೊಂದರಲ್ಲಿ ಉಗ್ರರು ಅಡಗಿ ಕುಳಿತಿದ್ದು, ಉಗ್ರರನ್ನು ಸದೆಬಡಿಯಲು ಭಾರತೀಯ ಸೇನಾಪಡೆ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಶುಕ್ರವಾರ ತಿಳಿದುಬಂದಿದೆ. 
ಪುಲ್ವಾಮ ಜಿಲ್ಲೆಯ ಛತಪೊರಾ ಎಂಬ ಪ್ರದೇಶದಲ್ಲಿರುವ ಕಟ್ಟಡಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಭದ್ರತಾ ಪಡೆಗಳು, ಕಟ್ಟಡದ ಸುತ್ತಲೂ ನಿಂತು ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ಆರಂಭಿಸಿವೆ. 
ಪ್ರಸ್ತುತ ಸ್ಥಳದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿಗಳು ನಡೆಯುತ್ತಿದ್ದು, ಈ ವರೆಗೂ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. 
ಇಂದು ಬೆಳಿಗ್ಗೆಯಷ್ಟೇ ಕುಪ್ವಾರ ಜಿಲ್ಲೆಯ ತ್ರೆಹ್ಗಾಮ್ ಎಂಬ ಪ್ರದೇಶದಲ್ಲಿ ಎನ್'ಕೌಂಟರ್ ನಡೆಸಿದ್ದ ಭದ್ರತಾ ಪಡೆಗಳು, ಓರ್ವ ಉಗ್ರನನ್ನು ಹತ್ಯೆ ಮಾಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಭದ್ರಕೋಟೆ ಮುರಿಯಲು BJP-JDS ರಣತಂತ್ರ; HDK ನೇತೃತ್ವದಲ್ಲಿ ಮಹತ್ವದ ಸಭೆ..!

ಮಲೆನಾಡು, ಕರಾವಳಿ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಆದ್ಯತೆ: ಕೇಂದ್ರ ಸಚಿವ ವಿ. ಸೋಮಣ್ಣ

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...