ದೇಶ

ಆರೋಗ್ಯವಂತ ಜನರಿಂದ ದೇಶದಲ್ಲಿ ಆರೋಗ್ಯಯುತ ಸಮಾಜ ನಿರ್ಮಾಣ: ಪ್ರಧಾನಿ ಮೋದಿ

Shilpa D
ನವದೆಹಲಿ: ದೇಶದ ಆರೋಗ್ಯ ವ್ಯವಸ್ಥೆ ಸುಧಾರಿಸಲು ಒತ್ತು ನೀಡಲು ಸರ್ಕಾರ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಎಲ್ಲಾ  ಸೌಕರ್ಯ ಒದಗಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ,
ದೆಹಲಿಯ ಏಮ್ಸ್ ನಲ್ಲಿ ನ್ಯಾಷನಲ್ ಸೆಂಟರ್ ಫಾರ್ ಏಜಿಂಗ್ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ದೇಶ ಆರೋಗ್ಯವಂತರಿಂದ ಕೂಡಿದರೇ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುತ್ತದೆ ಎಂದು ಹೇಳಿದ್ದಾರೆ. 
ಕಳೆದ ನಾಲ್ಕು ವರ್ಷಗಳಲ್ಲಿ ದೇಶದಲ್ಲಿ ಆರೋಗ್ಯ ವ್ಯವಸ್ಥೆ ಗಣನೀಯ ಪ್ರಮಾಣದಲ್ಲಿ ಸುಧಾರಿಸಿದೆ, ಬಡ ಹಾಗೂ ಮಧ್ಯಮ ವರ್ಗದ ಜನ ಉತ್ತಮ ಆರೋಗ್ಯ ಸೇವೆ ಪಡೆಯುವಲ್ಲಿ ಕೇಂದ್ರ ಸರ್ಕಾರದ ಹಲವು ಆರೋಗ್ಯ. ನೀತಿಗಳು ಕಾರಣವಾಗಿವೆ ಎಂದು ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲೂ ಕೂಡ ಆರೋಗ್ಯ ವ್ಯವಸ್ಥೆ ಸುಧಾರಿಸಲು ಅಗತ್ಯವಿರುವ ಉಪಕರಣಗಳನ್ನು ಒದಗಿಸಲಾಗುವುದು, ಹೊಸ ಭಾರತ ಯೋಜನೆಯಡಿ 58 ಜಿಲ್ಲಾ ಆಸ್ಪತ್ರೆಗಳಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ, ಹಾಗೂ ಮೇಲ್ದರ್ಜೆಗೇರಿಸುವುದು ಆಧುನಿಕ ಉಪಕರಣಗಳ ಪೂರೈಕೆ  ಸೇರಿದಂತೆ ಎಲ್ಲಾ ವೈದ್ಯಕೀಯ ಸೇವೆಗಳನ್ನು ಪೂರೈಸಲಾಗಿಸುವುದು ಎಂದು ಹೇಳಿದ್ದಾರೆ.
2025ರ ವೇಳೆಗೆ ದೇಶದಲ್ಲಿ ಕ್ಷಯರೋಗ ನಿರ್ಮೂಲನೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
SCROLL FOR NEXT