ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗುಸ್ತು ತಿರುಗುತ್ತಿದ್ದ ಭಾರತೀಯ ಯೋಧರ ಮೇಲೆ ಉಗ್ರರು ಗ್ರೈನೇಡ್ ದಾಳಿ ನಡೆಸಿದ್ದು ಪರಿಣಾಮ ಇಬ್ಬರು ಯೋಧರು ಗಾಯಗೊಂಡಿದ್ದಾರೆ.
ಗ್ರೈನೇಡ್ ದಾಳಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದು ಅವರನ್ನು ಕೂಡಲೇ ಸೇನಾಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.