ಅಹಮದಾಬಾದ್: ಅಪಾರ್ಟ್‌ಮೆಂಟ್‌ನ ಬಾಲ್ಕನಿಯಿಂದ ಕೆಳಗೆ ಬಿದ್ದ ಹೆಣ್ಣು ಮಗುವೊಂದು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಅಹಮದಾಬಾದ್ ನ ಜುಹಾಪುರದ ರಾಯಲ್ ಅಕ್ಬರ್ ಟವರ್ ನ ಅಪಾರ್ಟ್‌ಮೆಂಟ್‌ನಲ್ಲಿ ಘಟನೆ ನಡೆದಿದೆ. ಮಗು ಬಾಲ್ಕನಿಯಿಂದ ಕೆಳಗೆ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇನ್ನು ಮಗು ಕೆಳಗೆ ಬಿಳುತ್ತಿದ್ದಂತೆ ಅಲ್ಲೇ ಪಕ್ಕದಲ್ಲಿ ನಿಂತಿದ್ದ ಮಹಿಳೆಯರಿಬ್ಬರು ಓಡಿ ಬಂದು ಮಗುವನ್ನು ಎತ್ತಿಕೊಂಡಿದ್ದಾರೆ. ಮಗುವಿನ ಕೈ ಮುರಿದಿರಬಹುದು ಆದರೆ ಪ್ರಾಣಕ್ಕೆ ಯಾವುದೇ ಹಾನಿಯಾಗಿಲ್ಲ.