ಇಕ್ಬಾಲ್ ಕಸ್ಕರ್-ದಾವೂದ್ ಇಬ್ರಾಹಿಂ 
ದೇಶ

ಸುಲಿಗೆ ಪ್ರಕರಣ: ದಾವೂದ್, ಇಕ್ಬಾಲ್ ಕಸ್ಕರ್, ಅನೀಸ್ ಇಬ್ರಾಹಿಂ ವಿರುದ್ಧ ಜಾರ್ಜ್ ಶೀಟ್!

ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ದೊರೆ ದಾವೂದ್ ಇಬ್ರಾಹಿಂ, ಇಕ್ಬಾಲ್ ಕಸ್ಕರ್ ಮತ್ತು ಅನೀಸ್ ಇಬ್ರಾಹಿಂ ವಿರುದ್ಧ ಥಾಣೆ ಪೊಲೀಸರು ಚಾರ್ಜ್ ಶೀಟ್ ದಾಖಲಿಸಿದ್ದಾರೆ...

ಮುಂಬೈ: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ದೊರೆ ದಾವೂದ್ ಇಬ್ರಾಹಿಂ, ಇಕ್ಬಾಲ್ ಕಸ್ಕರ್ ಮತ್ತು ಅನೀಸ್ ಇಬ್ರಾಹಿಂ ವಿರುದ್ಧ ಥಾಣೆ ಪೊಲೀಸರು ಚಾರ್ಜ್ ಶೀಟ್ ದಾಖಲಿಸಿದ್ದಾರೆ. 
ಕಳೆದ ವರ್ಷ ಬಿಲ್ಡರ್ ಒಬ್ಬರು ದೂರು ನೀಡಿದ್ದು ಈ ಸಂಬಂಧ ಈ ಮೂವರ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿರುವ ಸುಲಿಗೆ ನಿಗ್ರಹ ದಳ(ಎಇಸಿ)ದ ಥಾಣೆಯ ಹಿರಿಯ ಇನ್ಸ್ ಪೆಕ್ಟರ್  ನೇರವಾಗಿ ಜಿಲ್ಲಾ ಕೋರ್ಟ್ ಗೆ ಸಲ್ಲಿಸಿದ್ದಾರೆ. 
ಸುಲಿಗೆ ಪ್ರಕರಣದ ಆರೋಪದಡಿಯಲ್ಲಿ ಕೇಂದ್ರ ಮುಂಬೈನ ನಾಗಪಾದ್ ಪ್ರದೇಶದಲ್ಲಿರುವ ಇಕ್ಬಾಲ್ ಕಸ್ಕರ್ ನಿವಾಸದಿಂದಲೇ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಎನ್ ಕೌಂಟರ್  ಸ್ಪೆಷಲಿಸ್ಟ್ ಮತ್ತು ಸುಲಿಗೆ ನಿಗ್ರಹ ದಳದ ಹಿರಿಯ ಅಧಿಕಾರಿ ಇನ್ಸ್ ಪೆಕ್ಟರ್ ಪ್ರದೀಪ್ ಶರ್ಮಾ ಅವರ ನೇತೃತ್ವದಲ್ಲಿ ಕಳೆದ ಸೆಪ್ಟೆಂಬರ್ 18ರ ತಡರಾತ್ರಿ ದಾಳಿ ಮಾಡಿ ಆತನನ್ನು ಬಂಧಿಸಿದ್ದರು. 
ಮುಂಬೈನ ಥಾಣೆ ಮೂಲದ ಉದ್ಯಮಿಯೊಬ್ಬರಿಗೆ ಕೆಲ ಅನಾಮಧೇಯ ವ್ಯಕ್ತಿಗಳು ತಾವು ಇಕ್ಬಾಲ್ ಅನ್ಸಾರಿ ಹುಡುಗರು ಎಂದು ಹೇಳಿ ಬೆದರಿಕೆ ಕರೆಗಳನ್ನು ಮಾಡಿದ್ದು ಈ ಬಗ್ಗೆ ಉದ್ಯಮಿ ಮುಂಬೈ  ಪೊಲೀಸರಿಗೆ ದೂರು ನೀಡಿದ್ದರು. 
ಉದ್ಯಮಿ ತನ್ನ ದೂರಿನಲ್ಲಿ ಗೊರೈ ಪ್ರದೇಶದಲ್ಲಿರುವ 38 ಎಕರೆ ಜಮೀನು ಸಂಬಂಧ 3 ಕೋಟಿ ರುಪಾಯಿ ನೀಡುವಂತೆ ಬೆದರಿಕೆ ಕರೆ ಮಾಡಿದ್ದಾರೆ ಎಂದು ದೂರಿದ್ದರು. ಈ ಸಂಬಂಧ ಇಕ್ಬಾಲ್ ಕಸ್ಕರ್ ವಿರುದ್ಧ ಐಪಿಸಿ ಸೆಕ್ಷನ್ 384, 386, 387ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ

ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್‌ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Video

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್