ಕ್ಯಾಥೋಲಿಕ್ ಬಿಷಪ್ 
ದೇಶ

ಕೇರಳ: ಕ್ಯಾಥೋಲಿಕ್ ಪಾದ್ರಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ ನನ್

ಕೇರಳದ ಸೀರೊ-ಮಲಬಾರ್ ಕ್ಯಾಥೋಲಿಕ್ ಚರ್ಚ್ ನ ಪಾದ್ರಿಯ ವಿರುದ್ಧ ಸನ್ಯಾಸಿನಿಯೊಬ್ಬರು ಅತ್ಯಾಚಾರ...

ಕೊಟ್ಟಾಯಂ: ಕೇರಳದ ಸೀರೊ-ಮಲಬಾರ್ ಕ್ಯಾಥೋಲಿಕ್ ಚರ್ಚ್ ನ ಪಾದ್ರಿಯ ವಿರುದ್ಧ ಸನ್ಯಾಸಿನಿಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.
ಮೂಲಗಳ ಪ್ರಕಾರ, ಕುರುವಿಲಂಗಡ್ ಕಾನ್ವೆಂಟ್ ನಲ್ಲಿ ವಾಸಿಸುತ್ತಿದ್ದ ಸನ್ಯಾಸಿನಿಯೊಬ್ಬರು ಜಲಂಧರ್ ನ ರೋಮನ್ ಕ್ಯಾಥೋಲಿಕ್ ಬಿಷಪ್ ಫ್ರಾಂಕೊ ಮುಲ್ಲಕ್ಕಲ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದಾರೆ.
ಮಹಿಳೆಯ ದೂರಿನ ಪ್ರಕಾರ, ಬಿಷಪ್ ಮುಲ್ಲಕ್ಕಲ್ ಅವರು, ಮೇ 2014ರಲ್ಲಿ ಕುರುವಿಲಂಗಡ್ ನಲ್ಲಿರುವ ಅತಿಥಿ ಗೃಹದಲ್ಲಿ ಸನ್ಯಾಸಿನಿ ಮೇಲೆ ಅತ್ಯಾಚಾರ ಎಸಗಿದ್ದು, ಬಳಿಕ ಪಾದ್ರಿ ಹಲವು ಬಾರಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಈ ಸಂಬಂಧ ಮಹಿಳೆ ಕೊಟ್ಟಾಯಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.
ಮೂಲಗಳ ಪ್ರಕಾರ, ನನ್ ಈ ಹಿಂದೆ ಪಾದ್ರಿಯ ವಿರುದ್ಧ ಚರ್ಚ್ ಅಧಿಕಾರಿಗಳಿಗೆ ದೂರು ನೀಡಿದ್ದರು. ಆದರೆ ಅವರು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಈಗ ಪೊಲೀಸರಿಗೆ ದೂರು ನೀಡಿದ್ದಾರೆ.
ಇನ್ನು ಪಾದ್ರಿ ಸಹ ಕೊಟ್ಟಾಯಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪ್ರತಿ ದೂರು ನೀಡಿದ್ದು, ನನ್ ತನಗೆ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನನ್ ವಿರುದ್ಧ ಶಿಸ್ತು ಕ್ರಮ ಮತ್ತು ವರ್ಗಾವಣೆ ಮಾಡಿದ್ದರಿಂದ ಈ ರೀತಿ ನನ್ನ ವಿರುದ್ಧ ಆಧಾರ ರಹಿತಿ ಆರೋಪ ಮಾಡುತ್ತಿದ್ದಾರೆ ಎಂದು ಪಾದ್ರಿ ದೂರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ