ಸಂಗ್ರಹ ಚಿತ್ರ 
ದೇಶ

ಛತ್ತೀಸ್ ಘಡದಲ್ಲಿ ಭೀಕರ ಎನ್ ಕೌಂಟರ್, ಮಾವೋ ನಾಯಕ ಹರಿಭೂಷಣ್ ಸೇರಿ 12 ನಕ್ಸಲರು ಸಾವು

ಛತ್ತೀಸ್ ಘಡದಲ್ಲಿ ನಕ್ಸಲರ ಹಾವಳಿ ಮುಂದುವರೆದಿರುವಂತೆಯೇ ಕಾರ್ಯಾಚರಣೆ ನಡೆಸಿದ ಭದ್ರತಾ ಸಿಬ್ಬಂದಿಗಳು 12 ಮಂದಿ ನಕ್ಸಲರನ್ನು ಸದೆಬಡಿದಿದ್ದಾರೆ ಎಂದು ತಿಳಿದುಬಂದಿದೆ.

ಬಿಜಾಪುರ್: ಛತ್ತೀಸ್ ಘಡದಲ್ಲಿ ನಕ್ಸಲರ ಹಾವಳಿ ಮುಂದುವರೆದಿರುವಂತೆಯೇ ಕಾರ್ಯಾಚರಣೆ ನಡೆಸಿದ ಭದ್ರತಾ ಸಿಬ್ಬಂದಿಗಳು 12 ಮಂದಿ ನಕ್ಸಲರನ್ನು ಸದೆಬಡಿದಿದ್ದಾರೆ ಎಂದು ತಿಳಿದುಬಂದಿದೆ.

ಛತ್ತೀಸ್ ಘಡದ ಬಿಜಾಪುರ ಜಿಲ್ಲೆಯ ಪೂಜಾರಿ ಕಂಕರ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ಇರುವ ಕುರಿತು ಖಚಿತ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಗಳು ರಾತ್ರೋ ರಾತ್ರಿ ಕಾರ್ಯಾಚರಣೆ ನಡೆಸಿದ್ದಾರೆ. ಇಂದು ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ಮಾವೋ ನಾಯಕ ಹರಿಭೂಷಣ್ ಸೇರಿದಂತೆ ಕನಿಷ್ಟ 12 ಮಂದಿ ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಅಂತೆಯೇ ಕಾರ್ಯಾಚರಣೆಯಲ್ಲಿ ಹಲವು ಭದ್ರತಾ ಸಿಬ್ಬಂದಿಗಳಿಗೆ ಗಾಯಗಳಾಗಿದ್ದು, ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ಗ ಓರ್ವ ಪೊಲೀಸ್ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನು ಇತ್ತ ಭದ್ರತಾ ಸಿಬ್ಬಂದಿಗಳು ಗುಂಡಿನ ದಾಳಿ ನಡೆಸುತ್ತಿದ್ದಂತೆಯೇ ಪ್ರತಿದಾಳಿ ನಡೆಸಿದ ನಕ್ಸಲರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಪರಾರಿಯಾಗಿರುವ ನಕ್ಸಲರಿಗಾಗಿ ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವಿಶೇಷ ಡಿಜಿ ಡಿಎಂ ಅವಸ್ಥಿ ಅವರು ಹೇಳಿದ್ದಾರೆ.

ತೆಲಂಗಾಣ ಮತ್ತು ಛತ್ತೀಸ್ ಘಡದ ನಕ್ಸಲ್ ನಿಗ್ರಹ ಪಡೆಗಳು ಈ ಜಂಟೀ ಕಾರ್ಯಾಚರಣೆ ನಡೆಸಿವೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ