ನವದೆಹಲಿ: ಸಿಬ್ಬಂದಿ ಆಯ್ಕೆ ಆಯೋಗ(ಎಸ್ ಎಸ್ ಸಿ) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಇದು ಸಾವಿರಾರು ಅಭ್ಯರ್ಥಿಗಳ ವಿಶ್ವಾರ್ಹತೆಯ ಪ್ರಶ್ನೆಯಾಗಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ದೆಹಲಿ ಸಿಎಂ ಒತ್ತಾಯಿಸಿದ್ದಾರೆ. ಅಲ್ಲದೆ ಸಾವಿರಾರು ಅಭ್ಯರ್ಥಿಗಳು ಸಹ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಸ್ವರಾಜ್ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್ ಸಹ ಸೋರಿಕೆ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
ಫೆಬ್ರವರಿ 17ರಿಂದ 21ರ ವರೆಗೆ ನಡೆದ ಎಸ್ ಎಸ್ ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿ ಫೆಬ್ರವರಿ 27ರಿಂದ ನೂರಾರು ವಿದ್ಯಾರ್ಥಿಗಳು ದೆಹಲಿ ಲೋಧಿ ರಸ್ತೆಯ ಸಿಜಿಒ ಕಾಂಪ್ಲೆಕ್ಸ್ ನಲ್ಲಿ ಎಸ್ ಎಸ್ ಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics