ಚೆನ್ನೈ: ಅನಾರೋಗ್ಯ ಕಾರಣದಿಂದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿನ್ನೆ ಚೆನ್ನೈ ನ ಅಪಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೂತ್ರ ಸಂಬಂಧಿತ ಕಾಯಿಲೆಯಿಂದಾಗಿ ಪಿಣರಾಯಿ ವಿಜಯನ್ ಆಸ್ಪತ್ರೆಗೆ ದಾಖಲಾಗಿದ್ದಾರೆ, ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಅವರಿಗೆ ಯಾವ ತೊಂದರೆಯಾಗಿದೆ ಎಂಬುದನ್ನು ಇದುವರೆಗೂ ಸಾರ್ವಜನಿಕವಾಗಿ ಬಹಿರಂಗ ಪಡಿಸಿಲ್ಲ.
ಪಿಣರಾಯಿ ಅವರು ರಾತ್ರಿ 11.55ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು, ಇದೊಂದು ದೈನಂದಿನ ಚೆಕ್ ಅಪ್ ಗಾಗಿ ಬಂದಿದ್ದಾರೆ, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅಪೊಲೋ ಆಸ್ಪತ್ರೆ ರಿಲೀಸ್ ಮಾಡಿರುವ ಮೆಡಿಕಲ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.