ದೆಹಲಿ: ಇತ್ತೀಚೆಗೆ ನಾಗಾಲ್ಯಾಂಡ್, ತ್ರಿಪುರಾ ಮತ್ತು ಮಣಿಪುರ ವಿಧಾನಸಭೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು. ಬಿಗಿ ಭದ್ರತೆಯಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದೆ.
3 ಈಶಾನ್ಯ ರಾಜ್ಯಗಳ ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಯಿಂದಲೇ ಆರಂಭವಾಗಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
ತ್ರಿಪುರಾದಲ್ಲಿ ಫೆ.18, ನಾಗಾಲ್ಯಾಂಡ್ ಮತ್ತು ಮೇಘಾಲಯಗಳಲ್ಲಿ ಫೆ.27ರಂದು ಚುನಾವಣೆ ನಡೆದಿತ್ತು. ಮೂರೂ ರಾಜ್ಯಗಳಲ್ಲಿ ಬಿಜೆಪಿ ಪ್ರಾಬಲ್ಯ ಮೆರೆಯಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿವೆ.ಈ ಮೂರು ರಾಜ್ಯಗಳು ತಲಾ 60 ಸದಸ್ಯ ಬಲ ಹೊಂದಿವೆಯಾದರೂ, ಚುನಾವಣೆ ನಡೆದಿರುವುದು ತಲಾ 59 ಸ್ಥಾನಗಳಿಗೆ ಮಾತ್ರ.

ತ್ರಿಪುರಾದಲ್ಲಿ ಕೇಂದ್ರ ಅರೆಸೇನಾಪಡೆ ಮತ್ತು ತ್ರಿಪುರಾ ಸ್ಟೇಟ್ ರೈಫಲ್ಸ್ ಸೇರಿ ಮೂರು ಸ್ತರಗಳಲ್ಲಿ ಭದ್ರತೆ ಕಲ್ಪಿಸಲಾಗಿದೆ ಎಂದು ಅಲ್ಲಿನ ಚುನಾವಣಾಧಿಕಾರಿ ಶ್ರೀರಶಂ ತರಣಿಕಾಂತ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics