ಸಂಗ್ರಹ ಚಿತ್ರ 
ದೇಶ

ವಿಧಾನಸಭೆ ಚುನಾವಣೆ: ಮೇಘಾಲಯದಲ್ಲಿ ಕಾಂಗ್ರೆಸ್ ಮುನ್ನಡೆ, ನಾಗಾಲ್ಯಾಂಡ್ ನಲ್ಲಿ ಅಧಿಕಾರದತ್ತ ಎನ್ ಡಿಪಿಪಿ ಮೈತ್ರಿಕೂಟ

ತೀವ್ರ ಕುತೂಹಲ ಕೆರಳಿಸಿರುವ ಈಶಾನ್ಯ ಭಾರತದ ಮೂರು ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ತ್ರಿಪುರಾದಲ್ಲಿ ಬಿಜೆಪಿ ಮತ್ತು ಎಡಪಕ್ಷಗಳ ನಡುವೆ ತೀವ್ರ ಪೈಪೋಟಿ ಎದುರಾಗಿದೆ.

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಈಶಾನ್ಯ ಭಾರತದ ಮೂರು ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ತ್ರಿಪುರಾದಲ್ಲಿ ಬಿಜೆಪಿ ಮತ್ತು ಎಡಪಕ್ಷಗಳ ನಡುವೆ ತೀವ್ರ ಪೈಪೋಟಿ ಎದುರಾಗಿದೆ.
ಒಟ್ಟು 59 ಸ್ಥಾನಗಳ ತ್ರಿಪುರಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಳೆದ 25 ವರ್ಷಗಳಿಂದ  ಆಡಳಿತದ ಚುಕ್ಕಾಣಿ ಹಿಡಿದಿರುವ ಸಿಪಿಎಂಗೆ ಈ ಬಾರಿ ಚುನಾವಣೆಯಲ್ಲಿ ಹಿನ್ನಡೆ ಕಂಡು ಬಂದಿದೆ.  ಎಡಪಕ್ಷಗಳು ಒಟ್ಟು 24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಕಳೆದ ಬಾರಿಯ ಚುನಾವಣೆಗೆ ಹೋಲಿಕೆ ಮಾಡಿದರೆ ತ್ರಿಪುರಾದಲ್ಲಿ ಬಿಜೆಪಿ ಗಣನೀಯ ಸಾಧನೆ ಗೈದಿದ್ದು, ಕಳೆದ ಬಾರಿಗಿಂತ ಈ ಬಾರಿ 35 ಸ್ಥಾನಗಳಲ್ಲಿ ಭಾರಿ ಮುನ್ನಡೆ ಸಾಧಿಸಿದೆ. 
ಇನ್ನು 59 ಸ್ಥಾನಗಳನ್ನು ಹೊಂದಿರುವ ಮೇಘಾಲಯದಲ್ಲಿ ಕಾಂಗ್ರೆಸ್ 22 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಎನ್ ಪಿಪಿ 15 ಮತ್ತು ಬಿಜೆಪಿ 16 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇತರರು 14 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ  ನಾಗಾಲ್ಯಾಂಡ್ ನ 60 ವಿಧಾನಸಭಾ ಕ್ಷೇತ್ರಗಳ ಪೈಕಿ, ಎನ್ ಪಿಎಫ್ ಮೈತ್ರಿಕೂಟ 24 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಎನ್ ಡಿಪಿಪಿ ಮೈತ್ರಿಕೂಟ 32 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. 
ಒಟ್ಟಾರೆ ಈಶಾನ್ಯ ಭಾರತ ಚುನಾವಣೆಯಲ್ಲಿ ಬಿಜೆಪಿ ಪ್ರಗತಿದಾಯಕ ಪ್ರದರ್ಶನ ತೋರುವಂತೆ ಕಾಣುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

'KSRTCಯಲ್ಲಿ ಡೀಸೆಲ್ ಕೊರತೆ ತಾತ್ಕಾಲಿಕ'; ಹಣದ ಕೊರತೆ ಇದ್ದಿದ್ದರೆ, ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತಿದ್ದವೇ?': ಜಿ ಪರಮೇಶ್ವರ

ಪಂದ್ಯ ಮುಗಿಸಿ ಮನೆಗೆ ಮರಳುವಾಗ ಭೀಕರ ಅಪಘಾತ, 4 ಕ್ರಿಕೆಟಿಗರ ದಾರುಣ ಸಾವು!