ತ್ರಿಪುರಾ : ಸತತ 25 ವರ್ಷಗಳ ಎಡಪಕ್ಷದ ಆಡಳಿತ ಅಂತ್ಯಗೊಂಡು ಬಿಜೆಪಿಗೆ ಸ್ಪಷ್ಟ ಬಹುಮತ ದೊರೆತಿರುವ ತ್ರಿಪುರಾದಲ್ಲಿ ಮುಖ್ಯಮಂತ್ರಿಯಾಗಲು ಸಿದ್ಧವಿರುವುದಾಗಿ ತ್ರಿಪುರಾ ಬಿಜೆಪಿ ಘಟಕದ ಅಧ್ಯಕ್ಷ ಬಿಪ್ ಲಾಬ್ ಕುಮಾರ್ ದೇಬ್ ಹೇಳಿದ್ದಾರೆ.
ಮುಖ್ಯಮಂತ್ರಿ ಜವಾಬ್ದಾರಿ ವಹಿಸಿಕೊಳ್ಳಲು ನಾನು ಸಿದ್ದನಿದ್ದೇನೆ. ಈ ಹೊಣೆಯಿಂದ ತಪ್ಪಿಸಿಕೊಂಡು ಓಡುವುದಿಲ್ಲ ಈಗಾಗಲೇ ಪಕ್ಷದ ಸ್ಥಾನ
ವಹಿಸಿಕೊಂಡು ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸ ಮಾಡಿದ್ದೇನೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಎರಡು ದಶಕದ ನಂತರ ಎಡಪಕ್ಷದ ಸರ್ಕಾರ ಅಂತ್ಯಗೊಳಿಸಿ ಬಿಜೆಪಿಯನ್ನು ಜನ ಅಧಿಕಾರಕ್ಕೆ ತಂದಿದ್ದಾರೆ , ಪಕ್ಷ ಅಧಿಕಾರಕ್ಕೆ ಬರುವಲ್ಲಿ ಪ್ರಧಾನಿ ನರೇಂದ್ರಮೋದಿ ಹಾಗೂ ಅಮಿತ್ ಶಾ ಅವರ ಪಾತ್ರವೂ ಮಹತ್ವದಾಗಿದೆ ಎಂದು ದೇಬ್ ಹೇಳಿದ್ದಾರೆ.
ಈ ಸಂಬಂಧ ಪಕ್ಷದ ಸಂಸದೀಯ ಮಂಡಳಿ ಸಭೆ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ
ಮಹಾದೇವ್ ತಿಳಿಸಿದ್ದಾರೆ.