ಕಾಶ್ಮೀರದಲ್ಲಿ ಓರ್ವ ಉಗ್ರ, ಆತನ ಮೂವರು ಸಹಚರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ....
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಉಗ್ರ ಹಾಗೂ ಆತನ ಮೂವರು ಸಹಚರರನ್ನು ಹತ್ಯೆ ಮಾಡಲಾಗಿದೆ.
ಇಂದು ರಾತ್ರಿ 8 ಗಂಟೆಯ ಸುಮಾರಿಗೆ ಗಸ್ತು ವಾಹನದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪ್ರತಿ ದಾಳಿ ನಡೆಸಿದ ಪೊಲೀಸರು ಉಗ್ರನನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹತ್ಯೆಯಾದ ಉಗ್ರ ಶಾಹಿದ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದ್ದು, ಆತನ ಸಹಚರರನ್ನು ಸುಹೈಲ್ ಖಲಿಲ್ ವಗಯ್, ಮೋಹ್ದ್ ಶಾಹಿದ್ ಖಾನ್ ಮತ್ತು ಶಹನವಾಜ್ ಅಹ್ಮದ್ ವಗಯ್ ಎಂದು ಗುರುತಿಸಲಾಗಿದೆ.
ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದೆ ಎಂದು ಸೇನಾ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಅವರು ಹೇಳಿದ್ದಾರೆ.