ನವದೆಹಲಿ: 10 ಮತ್ತು 12 ನೇ ತರಗತಿ ಬೋರ್ಡ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಟಿಪ್ಸ್ ನೀಡಿದ್ದಾರೆ.
ಆತ್ಮವಿಶ್ವಾಸ ಹಾಗೂ ನಗುವಿನೊಂದಿಗೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು ಎಂದು ಗೇಳಿದ್ದಾರೆ, ನೆವರ್ ಗಿವ್ ಅಪ್ ಎಂಬುದನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಸಿಬಿಎಸ್ ಇ ಪಠ್ಯಕ್ರಮದ 12 ಮತ್ತು 10ನೇ ತರಗತಿ ಪರೀಕ್ಷೆ ಬರೆಯುತ್ತಿರುವ ನನ್ನ ಯುವ ಸ್ನೇಹಿತರಿಗೆ ಬೆಸ್ಟ್ ಆಫ್ ಲಕ್ ಎಂದು ಟ್ವಿಟ್ಟರ್ ನಲ್ಲಿ ಹೇಳಿದ್ದಾರೆ.
ಸುಮಾರು 28 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು 10 ಮತ್ತು 12 ನೇ ತರಗತಿ ಬೋರ್ಡ್ ಪರೀಕ್ಷೆ ಬರೆಯುತ್ತಿದ್ದಾರೆ.