ಅಕ್ರಮ ಹಣ ವರ್ಗಾವಣೆ ಪ್ರಕರಣ: ಆರ್ಜೆಡಿ ಸಂಸದೆ ಮಿಸಾ ಭಾರ್ತಿ ಹಾಗೂ ಪತಿಗೆ ಜಾಮೀನು
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರ್ಜೆಡಿ ಸಂಸದೆ ಮಿಸಾ ಭಾರ್ತಿ, ಪತಿಗೆ ದೆಹಲಿ ಸಿಬಿಐ ವಿಶೇಷ ಕೋರ್ಟ್ ಜಾಮೀನು ಮಂಜೂರು ಜಾಮೀನು ನೀಡಿದೆ...
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರ್ಜೆಡಿ ಸಂಸದೆ ಮಿಸಾ ಭಾರ್ತಿ, ಪತಿಗೆ ದೆಹಲಿ ಸಿಬಿಐ ವಿಶೇಷ ಕೋರ್ಟ್ ಜಾಮೀನು ಮಂಜೂರು ಜಾಮೀನು ನೀಡಿದೆ.
ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಆರ್ಜೆಡಿ ಸಂಸದೆ ಮಿಸಾ ಭಾರ್ತಿ ಮತ್ತು ಅವರ ಪತಿಗೆ ದೆಹಲಿಯ ಪಾಟಿಯಾಲದ ಸಿಬಿಐ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಕೋರ್ಟ್ ಅನುಮತಿ ಪಡೆಯದೆ ದೇಶ ತೊರೆಯದಂತೆ ಹಾಗೂ ತಲಾ 2 ಲಕ್ಷ ರೂ ಸ್ಯೂರಿಟಿ ನೀಡುವಂತೆ ಆದೇಶಿಸಿ ಜಾಮೀನು ನೀಡಲಾಗಿದೆ. ಈ ಮೂಲಕ ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಪುತ್ರಿಗೆ ಸ್ವಲ್ಪ ರಿಲೀಫ್ ಸಿಕ್ಕಂತಾಗಿದೆ. ಜಾಮೀನು ನೀಡದಂತೆ ಜಾರಿ ನಿರ್ದೇಶನಾಲಯ ವಿರೋಧ ವ್ಯಕ್ತಪಡಿಸಿತ್ತು.
ಇಂತಹ ಹುದ್ದೆಯಲ್ಲಿರುವ ವ್ಯಕ್ತಿಗಳು ಅಂಥಹ ಚಟುವಟಿಕೆ ಮಾಡಿ ದೇಶ ವಿರೋಧಿ ಕೆಲಸ ಮಾಡುತ್ತಾರೆ ಎಂದು ಇಡಿ ಪರ ವಕೀಲ ಅತುಲ್ ತ್ರಿಪಾಠಿ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.