ಸಂಗ್ರಹ ಚಿತ್ರ 
ದೇಶ

ಶೋಪಿಯಾನ್‌ ಉಗ್ರ ನಿಗ್ರಹ ಕಾರ್ಯಾಚರಣೆ: ಇಬ್ಬರು ಉಗ್ರರು ಸೇರಿ ಒಟ್ಟು ಆರು ಮಂದಿ ಸಾವು!

ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರು ದಾಳಿ ನಡೆಸಿದ್ದು, ಈ ವೇಳೆ ಸೇನೆ ನಡೆಸಿದ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರು ದಾಳಿ ನಡೆಸಿದ್ದು, ಈ ವೇಳೆ ಸೇನೆ ನಡೆಸಿದ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.
ದಕ್ಷಿಣ ಶೋಪಿಯಾನ್‌ ಜಿಲ್ಲೆಯ ಕುಗ್ರಾಮವೊಂದರಲ್ಲಿ ನಿನ್ನೆ ರಾತ್ರಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಇದೀಗ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದಿದ್ದ ಗುಂಡಿನ ಕಾಳಗದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ ಆರಕ್ಕೆ ಏರಿದೆ. ಘಟನಾ ಸ್ಥಳದಲ್ಲಿ ಇಂದು ಇನ್ನೂ ಒಂದು ಶವ ಪತ್ತೆಯಾಗಿದ್ದು, ಹತರಾದವರಲ್ಲಿ ಇಬ್ಬರು ಎಲ್‌ ಇ ಟಿ ಉಗ್ರರು ಮತ್ತು ಇತರರು ನಾಲ್ವರು ಎಂದು ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ. 
ಇನ್ನು ಗುಂಡೇಟಿನಿಂದ ಸಾವಿಗೀಡಾಗಿದ್ದ ಉಗ್ರ ಗುರುತು ಪತ್ತೆಯಾಗಿದ್ದು, ಈತ ಲಷ್ಕರ್‌ ಇ ತೊಯ್ಬಾ ಸಂಘಟನೆಯ ಉಗ್ರ ಆಶಿಕ್‌ ಹಸೇನ್‌ ಭಟ್‌ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ ಸೇನೆಯ 44ನೇ ರಾಷ್ಟ್ರೀಯ ರೈಫ‌ಲ್‌ ಪಡೆ ಮತ್ತು ಉಗ್ರರ ನಡುವೆ ಪಹನೂ ಪ್ರದೇಶದಿಂದ ಸುಮಾರು ಹತ್ತು ಕಿ.ಮೀ. ದೂರದ ಸೈದಾಪೋರಾದಲ್ಲಿನ ಆ್ಯಪಲ್‌ ತೋಟವೊಂದರಲ್ಲಿ ಭಾನುವಾರ ರಾತ್ರಿ  ಗುಂಡಿನ ದಾಳಿ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 
ಇಂದು ಪತ್ತೆಯಾದ ಹತ ಉಗ್ರನನ್ನು ಶೋಪಿಯಾನ್‌ನ ಜಾಮ್‌ನಗರೀ ಗ್ರಾಮದ ನಿವಾಸಿಯಾಗಿರುವ ಶಾಹೀದ್‌ ಅಹ್ಮದ್‌ ದಾರ್‌ ಎಂದು ಗುರುತಿಸಲಾಗಿದೆ. ಸೇನೆಯ ಗುಂಡಿಗೆ ಬಲಿಯಾದ ಪೌರರನ್ನು ಇನ್ನಷ್ಟೇ ಗುರುತಿಸಬೇಕಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!