ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಸುಂಜುವಾನ್‌ ಉಗ್ರ ದಾಳಿಯ ರೂವಾರಿ ಹತ್ಯೆಗೈದ ಸೇನೆ

ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರದ ಸಂಜುವಾನ್ ನಲ್ಲಿ ನಡೆದ ಉಗ್ರ ದಾಳಿಯ ರೂವಾರಿಯನ್ನು ಭದ್ರತಾ ಪಡೆಗಳು....

ಸಾಂದರ್ಭಿಕ ಚಿತ್ರ
Lingaraj Badiger
Updated On : 5 Mar 2018, 10:02 am
ಶ್ರೀನಗರ: ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರದ ಸಂಜುವಾನ್ ನಲ್ಲಿ ನಡೆದ ಉಗ್ರ ದಾಳಿಯ ರೂವಾರಿಯನ್ನು ಭದ್ರತಾ ಪಡೆಗಳು ಸೋಮವಾರ ಹೊಡೆದುರುಳಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಸೇನೆಯ ಒಂದು ಸಣ್ಣ ತುಕಡಿ ದಕ್ಷಿಣ ಕಾಶ್ಮೀರದ ಅವಂತಿಪೊರಾ ಅತ್ವಾ ಪ್ರದೇಶದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ ಸಂಜುವಾನ್ ದಾಳಿಯ ಸೂತ್ರಧಾರ ಜೈಶ್ ಎ ಮೊಹಮ್ಮದ್ ಉಗ್ರ ಮುಫ್ತಿ ವಖಾರ್‌ ನನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆ ತಿಳಿಸಿದೆ.
ದಕ್ಷಿಣ ಕಾಶ್ಮೀರದ ಲೆಟ್‌ಪೋರಾ ಸಿಆರ್ ಪಿಎಫ್ ಕ್ಯಾಂಪ್ ಮೇಲಿನ ದಾಳಿ ಹಾಗೂ ಸಂಜುವಾನ್ ಸೇನಾ ಕ್ಯಾಂಪ್ ದಾಳಿಯ ರೂವಾರಿ ವಖಾರ್ ಸೇನಾ ಕಾರ್ಯಾಚರಣೆಯಲ್ಲಿ ಮೃತಪಟ್ಟಿದ್ದಾನೆ. ಕಾರ್ಯಾಚರಣೆ ವೇಳೆ ಯಾವುದೇ ಯೋಧರು ಅಥವಾ ನಾಗರಿಕರ ಪ್ರಾಣಹಾನಿಯಾಗಿಲ್ಲ ಎಂದು ಸೇನೆ ಹೇಳಿದೆ.

Advertisement

Advertisement

ಫೆಬ್ರವರಿ 10ರಂದು ಜಮ್ಮು ಮತ್ತು ಕಾಶ್ಮೀರದ ಸುಂಜುವಾನ್‌ ಸೇನಾ ನೆಲೆಗಳ ಮೇಲೆ ದಾಳಿ ನಡೆದಿತ್ತು. ಈ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement