ರಜನಿಕಾಂತ್ 
ದೇಶ

ತಮಿಳುನಾಡಿಗೆ ನಾಯಕನ ಅಗತ್ಯವಿದೆ, ಆ ಕೊರತೆಯನ್ನು ನಾನು ತುಂಬುವೆ: ರಜನಿ

ರಾಜಕೀಯ ಪ್ರವೇಶಿಸುವುದಾಗಿ ಘೋಷಣೆ ಮಾಡಿದ ಬಳಿಕ ಮೊದಲ ಬಾರಿಗೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಸೂಪರ್ ಸ್ಟಾರ್ ರಜಿನಿಕಾಂತ್ ತಮಿಳುನಾಡಿಗೆ ನಾಯಕನ ಅಗತ್ಯವಿದ್ದು, ಆ ಕೊರತೆಯನ್ನು

ಚೆನ್ನೈ: ರಾಜಕೀಯ ಪ್ರವೇಶಿಸುವುದಾಗಿ ಘೋಷಣೆ ಮಾಡಿದ ಬಳಿಕ ಮೊದಲ ಬಾರಿಗೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಸೂಪರ್ ಸ್ಟಾರ್ ರಜಿನಿಕಾಂತ್ ತಮಿಳುನಾಡಿಗೆ ನಾಯಕನ ಅಗತ್ಯವಿದ್ದು, ಆ ಕೊರತೆಯನ್ನು ನಾನು ತುಂಬುತ್ತೇನೆ ಎಂದು ಭರವಸೆ ನೀಡಿದ್ದಾರೆ. 
ಡಾ.ಎಂಜಿಆರ್ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆಯಲ್ಲಿ ತಮಿಳುನಾಡಿನ ಮಾಜಿ ಸಿಎಂ ಎಂಜಿ ರಾಮಚಂದ್ರನ್ ಅವರ ಪುತ್ಥಳಿಯನ್ನು ಉದ್ಘಾಟಿಸಿದ ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ರಜಿನಿಕಾಂತ್, ನಿಮ್ಮ ಮನಸ್ಸು ಶುದ್ಧವಾಗಿದ್ದರೆ ಮಾತ್ರ ನೀವು ಒಳ್ಳೆಯ ಜನರನ್ನು ಹುಡುಕುವುದಕ್ಕೆ ಸಾಧ್ಯವಾಗುತ್ತದೆ, ಸ್ನೇಹಿತರನ್ನು ಎಚ್ಚರಿಕೆಯಿಂದ ಆಯ್ಕೆ ಮಾಡಿಕೊಳ್ಳಿ ಎಂದು ಹೇಳಿದ್ದಾರೆ. 
ಇದೇ ವೇಳೆ ತಮಿಳುನಾಡಿಗೆ ನಾಯಕತ್ವದ ಬಗ್ಗೆ ಮಾತನಾಡಿರುವ ಅವರು ಈಗ ಜಯಲಲಿತಾ ಇಲ್ಲ. ಕರುಣಾನಿಧಿಗೆ ಅನಾರೋಗ್ಯ ಕಾಡುತ್ತಿದೆ, ಆದ್ದರಿಂದ ರಾಜ್ಯಕ್ಕೆ ನಾಯಕನ ಅಗತ್ಯವಿದ್ದು, ಆ ಕೊರತೆಯನ್ನು ತುಂಬುವುದಾಗಿ ರಜನಿಕಾಂತ್ ಹೇಳಿದ್ದು, ರಾಜಕೀಯವನ್ನು ಅರ್ಥಮಾಡಿಕೊಳ್ಳಿ ಆದರೆ ಶಿಕ್ಷಣದತ್ತ ಹೆಚ್ಚು ಗಮನ ಹರಿಸಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ.  ಇನ್ನು ಕಾರ್ಯಕ್ರಮದಲ್ಲಿ ನಟ ಎಂಜಿಆರ್ ಬಗ್ಗೆಯೂ ಮಾತನಾಡಿರುವ ರಜನಿಕಾಂತ್, ತಮಿಳುನಾಡಿನ ರಾಜಕಾರಣದಲ್ಲಿ ಎಂಜಿಆರ್ ಗೆ ಸರಿಸಮನಾದ ನಾಯಕ ಬರುವುದಕ್ಕೆ ಆಗುವುದಿಲ್ಲ, "ಯಾರೂ ಸಹ ಮತ್ತೋರ್ವ ಎಂಜಿಆರ್ ಆಗಲಾರರು, ಮತ್ತೋರ್ವ ಎಂಜಿಆರ್ ಆಗುವುದರ ಬಗ್ಗೆ ಯೋಚನೆ ಮಾಡುವುದು ಮೂರ್ಖತನವಾಗುತ್ತದೆ ಎಂದು ರಜನಿಕಾಂತ್ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: 3ನೇ ಜಲಾಂತರ್ಗಾಮಿ ನಿಗ್ರಹ ಯುದ್ಧನೌಕೆ 'INS ಮಂಗ್ರೋಲ್' ಸೇರ್ಪಡೆ-Video

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!

'ಹೃದಯದ ಪ್ರಮುಖ ರಕ್ತನಾಳದಲ್ಲಿ ರಕ್ತದ ಹೆಪ್ಪುಗಟ್ಟುವಿಕೆ'; ಮರಣೋತ್ತರ ಪರೀಕ್ಷೆಯಲ್ಲಿ ನಟ ನಾನಾ ಪಟೇಕರ್ ಸಾವಿನ ಕಾರಣ ಬಹಿರಂಗ!