ಕಾಲುವೆಗೆ ಉರುಳಿಬಿದ್ದ ಟ್ರಕ್ 
ದೇಶ

ಗುಜರಾತ್: ಕಾಲುವೆಗೆ ಉರುಳಿಬಿದ್ದ ಮದುವೆ ದಿಬ್ಬಣದ ಟ್ರಕ್: 26 ಸಾವು

ಮದುವೆ ದಿಬ್ಬಣದ ಟ್ರಕ್ಕೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಸುಮಾರು 26 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್‌ನ ಭಾವನಗರ-ರಾಜಕೋಟ್‌ ...

ಭಾವ್ ನಗರ: ಮದುವೆ ದಿಬ್ಬಣದ ಟ್ರಕ್ಕೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಸುಮಾರು 26 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್‌ನ ಭಾವನಗರ-ರಾಜಕೋಟ್‌ ಹೆದ್ದಾರಿಯಲ್ಲಿ ನಡೆದಿದೆ.ಮೃತಪಟ್ಟವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ. 
ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮಗುಚಿಬಿದ್ದ ಟ್ರಕ್‌ನ ಅಡಿಯಲ್ಲಿ ಹಲವರು ಸಿಕ್ಕಿಬಿದ್ದಿದ್ದಾರೆ,ಪೊಲೀಸರು ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಗಾಯಗೊಂಡಿರುವ 12 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದುರಂತದ ಮಾಹಿತಿ ಬಂದ ಕೂಡಲೇ ಜಿಲ್ಲಾಡಳಿತ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು ಭಾವನಗರ, ಸಿಹೋರ್ ಮತ್ತು ಬೋಟಾಡ್‌ನಿಂದ ಕ್ರೇನ್‌ ಹಾಗೂ ಇತರ ಪರಿಕರಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. 
ಮದುವೆ ದಿಬ್ಬಣವನ್ನು ಕರೆದೊಯ್ಯುತ್ತಿದ್ದ ಈ ಟ್ರಕ್‌ನಲ್ಲಿ ಸುಮಾರು 60 ಮಂದಿ ಪ್ರಯಾಣಿಕರಿದ್ದರು. ಭಾಗವನಗರ- ರಾಜಕೋಟ್‌ ಹೆದ್ದಾರಿಯಲ್ಲಿ ಉಮ್ರಲಾ ಬಳಿ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್‌ ಒಣಗಿದ ಕಾಲುವೆಗೆ ಉರುಳಿಬಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!