ಸಾಂದರ್ಭಿಕ ಚಿತ್ರ 
ದೇಶ

ಮೂರು ವರ್ಷಗಳಿಂದ ಜಮ್ಮುಕಾಶ್ಮೀರದಲ್ಲಿ 29 ಸೈನಿಕರು ಹುತಾತ್ಮ - ಲೋಕಸಭೆಗೆ ಸರ್ಕಾರ ಮಾಹಿತಿ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿನ ಸೇನಾ ನೆಲೆ ಹಾಗೂ ಸೇನಾ ಶಿಬಿರದ ಮೇಲೆ ನಡೆದ ಉಗ್ರರ ದಾಳಿಯಿಂದ ಕಳೆದ ಮೂರು ವರ್ಷಗಳಲ್ಲಿ 29 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಸರ್ಕಾರ ಲೋಕಸಭೆಗೆ ತಿಳಿಸಿದೆ.

ದೆಹಲಿ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿನ ಸೇನಾ ನೆಲೆ ಹಾಗೂ ಸೇನಾ ಶಿಬಿರದ ಮೇಲೆ ನಡೆದ ಉಗ್ರರ ದಾಳಿಯಿಂದ ಕಳೆದ ಮೂರು ವರ್ಷಗಳಲ್ಲಿ 29 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಸರ್ಕಾರ ಲೋಕಸಭೆಗೆ ತಿಳಿಸಿದೆ.

ದಾಳಿ ವೇಳೆ 22 ಉಗ್ರರನ್ನು ಹತ್ಯೆಗೈಯಲಾಗಿದ್ದು, ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಖಾತೆ ರಾಜ್ಯ ಸಚಿವ ಸುಭಾಷ್ ಭಾಮ್ರೆ  ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

2016ರಲ್ಲಿ ಉರಿ ಸೇನಾ ನೆಲೆ ಮೇಲೆ ನಡೆದ ಉಗ್ರರ ದಾಳಿ ವೇಳೆಯಲ್ಲಿ ಅತಿ ಹೆಚ್ಚಿನ 26 ಮಂದಿ ಸೈನಿಕರು ಹುತಾತ್ಮರಾಗಿದ್ದರು. ಈ ವರ್ಷ  ಜಮ್ಮುವಿನ ಸೇನಾ ನೆಲೆ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಆರು ಸೈನಿಕರು ಹುತಾತ್ಮರಾಗಿದ್ದಾರೆ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಮತ್ತೊಂದೆಡೆ ರಾಜ್ಯಸಭೆಗೆ  ಉತ್ತರಿಸಿದ ಗೃಹ ಖಾತೆ ರಾಜ್ಯ ಸಚಿವ  ಹನ್ಸ್ ರಾಜ್ ಗಂಗರಾಮ್ ಅಹಿರ್, ಕಳೆದ ಮೂರು ವರ್ಷಗಳಲ್ಲಿ 872 ಉಗ್ರರ ದಾಳಿ ಪ್ರಕರಣಗಳು ಸಂಭವಿಸಿದ್ದು, 4799 ಕಲ್ಲೆಸೆತ ಪ್ರಕರಣಗಳು ನಡೆದಿವೆ. ಪ್ರತಿದಿನ ಆರು ಕಲ್ಲೆಸೆತ ಪ್ರಕರಣಗಳು ವರದಿಯಾಗುತ್ತಿವೆ ಎಂದು ತಿಳಿಸಿದರು.

ಒಟ್ಟಾರೇ, ಕಳೆದ ಮೂರು ವರ್ಷಗಳಲ್ಲಿ 471 ಉಗ್ರರ ದಾಳಿ ನಡೆದಿದ್ದು, 201 ಸೈನಿಕರು ಹುತಾತ್ಮರಾಗಿದ್ದಾರೆ. 72 ಮಂದಿ ಸಾರ್ವಜನಿಕರು ಸಾವನ್ನಪ್ಪಿದ್ದಾರೆ  ಎಂದು ಮಾಹಿತಿ ನೀಡಿದರು.

ದೇಶದೊಳಗೆ ಒಳನುಗ್ಗುವ ಸಲುವಾಗಿ ಗಡಿ ಪ್ರದೇಶದಾದ್ಯಂತ ಉಗ್ರರ ಉಪಟಳ ಕಂಡುಬರುತ್ತಿದೆ ಎಂದು ಅವರು ತಿಳಿಸಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!