ನೀಟ್ ಹಾಗೂ ಇತರೆ ಸಿಬಿಎಸ್ಇ ಪರೀಕ್ಷೆಗೆ ಆಧಾರ್ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಸೇರಿದಂತೆ ಇತರೆ ಯಾವುದೇ ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳಿಗೆ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ಆಧಾರ್ ಕಡ್ಡಾಯಗೊಳಿಸುವುದಿಲ್ಲ......
ನವದೆಹಲಿ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಸೇರಿದಂತೆ ಇತರೆ ಯಾವುದೇ ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳಿಗೆ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ಆಧಾರ್ ಕಡ್ಡಾಯಗೊಳಿಸುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ಪಂಚ ಸದಸ್ಯರ ಪೀಠ ಈ ಆದೇಶ ನೀಡಿದ್ದು ’ಪರೀಕ್ಷೆ ಬರೆಯಲು ಆಧಾರ್ ಕಡ್ಡಾಯವಿಲ್ಲ’ ಎನ್ನುವ ಮಾಹಿತಿಯನ್ನು ಸಿಬಿಎಸ್ಇ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಬೇಕು ಎಂದಿದೆ.
ನೀಟ್, ಎಂಬಿಬಿಎಸ್, ಬ್ಯಾಚುಲರ್ ಆಫ್ ಡೆಂಟಲ್ ಸರ್ಜರಿ ಸೇರಿದಂತೆ ಸಿಬಿಎಸ್ಇ ನಡೆಸುವ ಪರೀಕ್ಷೆಗಳಿಗೆ ಆಧಾರ್ ಕಡ್ಡಾಯ ಮಾಡಿ ಮಂಡಳಿ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಗುಜರಾತ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು.ಆದರೆ ಅದನ್ನು ಫೆ. 27ರಂದು ನ್ಯಾಯಾಲಯ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿತ್ತು.
ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಸಿಬಿಎಸಿ ಪರೀಕ್ಷೆಗಳಿಗೆ ಆಧಾರ್ ಕಡ್ಡಾಯವಲ್ಲ ಎಂದು ತೀರ್ಪು ಪ್ರಕಟಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.