ಹಾನಿಗೀಡಾದ ಪ್ರತಿಮೆಗಳು 
ದೇಶ

ಲೆನಿನ್, ಪೆರಿಯಾರ್ ಬಳಿಕ ಶ್ಯಾಮ್ ಪ್ರಸಾದ್ ಮುಖರ್ಜಿ ಪ್ರತಿಮೆಗೆ ಹಾನಿ: ಪ್ರಧಾನಿ ಮೋದಿ ತೀವ್ರ ಖಂಡನೆ

ಕಮ್ಯುನಿಸ್ಟ್ ನಾಯಕ ಲೆನಿನ್ ಅವರ ಎರಡು ಪ್ರತಿಮೆ ಹಾಗೂ ತಮಿಳುನಾಡಿನಲ್ಲಿ ಪೆರಿಯಾರ್ ಪ್ರತಿಮೆಯನ್ನು ಧ್ವಂಸ ಮಾಡಿರುವುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ...

ನವದೆಹಲಿ: ಕಮ್ಯುನಿಸ್ಟ್ ನಾಯಕ ಲೆನಿನ್ ಅವರ ಎರಡು ಪ್ರತಿಮೆ ಹಾಗೂ ತಮಿಳುನಾಡಿನಲ್ಲಿ ಪೆರಿಯಾರ್ ಪ್ರತಿಮೆಯನ್ನು ಧ್ವಂಸ ಪ್ರಕರಣದ ಬೆನ್ನಲ್ಲೇ ಕೋಲ್ಕತಾದ ಕಾಳಿಘಾಚ್ ನಲ್ಲಿರುವ ಶ್ಯಾಮ್ ಪ್ರಸಾದ್ ಮುಖರ್ಜಿ ಪ್ರತಿಮೆಯನ್ನೂ ಧ್ವಂಸ ಮಾಡಲಾಗಿದೆ.
ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಪ್ರತಿಮೆಗಳ ಧ್ವಂಸ ಪ್ರಕರಗಳ ಕುರಿತಂತೆ ಈಗಾಗಲೇ ಗೃಹ ಸಚಿವಾಲಯದೊಂದಿಗೆ ಪ್ರಧಾನಿ ಮೋದಿಯವರು ಮಾತುಕತೆ ನಡೆಸಿದ್ದು, ಘಟನೆ ಬಗ್ಗೆ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆಂದು ಗೃಹ ಸಚಿವಾಲಯ ಹೇಳಿದೆ. 
ಇಂತಹ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮೋದಿಯವರು ಸೂಚಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಆಯಾ ರಾಜ್ಯ ಸರ್ಕಾರಗಳು ಎಚ್ಚರ ವಹಿಸಬೇಕು. ಯಾರು ಇಂತಹ ಕೃತ್ಯವೆಸಗುತ್ತಾರೆಯೋ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ ಸಚಿವಾಲಯ ಸೂಚನೆ ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?