ಬಂಧಿತ ಶಾಸಕರು 
ದೇಶ

ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ: ಆಪ್ ಶಾಸಕರ ನ್ಯಾಯಾಂಗ ಬಂಧನ 14 ದಿನ ವಿಸ್ತರಣೆ

ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ...

ನವದೆಹಲಿ: ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಆಮ್ ಆದ್ಮಿ ಪಕ್ಷದ ಶಾಸಕರಾದ ಅಮನತುಲ್ಲಾ ಖಾನ್ ಮತ್ತು ಪ್ರಕಾಶ್ ಜರ್ವಾಲ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು 14 ದಿನಿಗಳ ಕಾಲ ವಿಸ್ತರಿಸಲಾಗಿದೆ.
ದೆಹಲಿ ಕೋರ್ಟ್ ಫೆಬ್ರವರಿ 22ರಂದು ಈ ಇಬ್ಬರು ಆಪ್ ಶಾಸಕರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇಂದು ಮತ್ತೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಿದೆ. 
ಜಾಮೀನು ಕೋರಿ ಆಪ್ ಶಾಸಕರು ಸಲ್ಲಿಸಿದ ಅರ್ಜಿಯನ್ನು ಫೆಬ್ರವರಿ 23ರಂದು ಮೆಟ್ರೊಪೋಲಿಟನ್ ಮ್ಯಾಜಿಸ್ಟ್ರೇಟ್ ಶೆಫಲ್ ಬರ್ನಾಲ ಟಂಡನ್ ಅವರು ವಜಾಗೊಳಿಸಿದ್ದರು. 
ಫೆ.19ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಸಭೆ ನಡೆಯುತ್ತಿದ್ದ ವೇಳೆ ತಮ್ಮ ಮೇಲೆ ಆಪ್ ಶಾಸಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮುಖ್ಯ ಕಾರ್ಯದರ್ಶಿ ದೆಹಲಿ ಪೊಲೀಸರಿಗೆ ದೂರು ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT