ಮಾಣಿಕ್ ಸರ್ಕಾರ್ ಗೆ ಆಹ್ವಾನ ನೀಡುತ್ತಿರುವುದು. 
ದೇಶ

ಪ್ರಮಾಣವಚನ ಸಮಾರಂಭಕ್ಕೆ ಮಾಣಿಕ್ ಸರ್ಕಾರ್ ಗೆ ತ್ರಿಪುರ ನಿಯೋಜಿತ ಸಿಎಂ ಆಹ್ವಾನ

ತ್ರಿಪುರ ನಿಯೋಜಿತ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್

ಅಗರ್ತಾಲ: ತ್ರಿಪುರ ನಿಯೋಜಿತ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ನಿರ್ಗಮಿತ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಅವರಿಗೆ ಗುರುವಾರ ಆಹ್ವಾನ ನೀಡಿದ್ದಾರೆ.
ಇಂದು ನಾವು ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಅವರನ್ನು ಭೇಟಿ ಮಾಡಿ, ನಾಳೆ ನಡೆಯುವ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಅಧಿಕೃತವಾಗಿ ಆಹ್ವಾನ ನೀಡಿದ್ದೇವೆ ಮತ್ತು ಅವರು ನಮ್ಮ ಆಹ್ವಾನವನ್ನು ಸ್ವೀಕರಿಸಿದ್ದು, ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಮಾಧವ್ ಅವರು ಹೇಳಿದ್ದಾರೆ.
ದೇಬ್ ಅವರು ನಾಳೆ ಬೆಳಗ್ಗೆ 10.30ಕ್ಕೆ ತ್ರಿಪುರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಾರ್ಚ್ 3ರಂದು ಸಿಪಿಐ-ಎಂನ 25 ವರ್ಷಗಳ ಆಡಳಿತಕ್ಕೆ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳು ಅಂತ್ಯ ಹಾಡಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!