ನವದೆಹಲಿ: ಸಂಸತ್ತಿನ ಕೆಳಮನೆಯಲ್ಲಿ ಸಂಸದರೂ ನನಗೂ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಶುಕ್ರವಾರ ತಮ್ಮ ಅಸಹಾಯಕತೆ ತೋಡಿಕೊಂಡಿದ್ದಾರೆ. ಅಲ್ಲದೆ ಮುಂದಿನ ವಾರ ಸರಿಹೋಗಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಮಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂಬ ಪ್ರತಿಪಕ್ಷಗಳ ಆರೋಪದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್, ಯಾರಿಗೂ ಮಾತನಾಡಲೂ ಅವಕಾಶ ನೀಡುತ್ತಿಲ್ಲ. ತಮಗೂ ಸಹ ಎಂದರು.
ಬಜೆಟ್ ಅಧಿವೇಶನದ ಮುಂದುವರೆದ ಭಾಗ ಕಳೆದ ಸೋಮವಾರದಿಂದ ಆರಂಭವಾಗಿದ್ದು, ಸದಸ್ಯರ ಕೋಲಾಹಲದಿಂದಾಗಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಮಾತನಾಡಲು ಅವಕಾಶ ಸಿಗಲಿಲ್ಲ ಎಂದು ಸ್ಪೀಕರ್ ಹೇಳಿದ್ದಾರೆ.
ಕಲಾಪ ಸುಗಮವಾಗಿ ನಡೆಯುತ್ತಿದ್ದರೆ ಪ್ರತಿಯೊಬ್ಬರು ಮಾತನಾಡಬಹುದು. ಮುಂದಿನ ವಾರ ಕಲಾಪ ಸುಗಮವಾಗಿ ನಡೆಯುವ ವಿಶ್ವಾಸವಿದೆ. ಸುಗಮ ಕಲಾಪಕ್ಕಾಗಿ ನಾನು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೇನೆ ಎಂದು ಮಹಾಜನ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics