ನವದೆಹಲಿ: ಕಾರ್ಯಾಚರಣೆಯ ಮಾರ್ಗಸೂಚಿಗಳನ್ನು ಮತ್ತು ಕೆವೈಸಿ ನಿಯಮಗಳನ್ನು ಉಲ್ಲಂಘಿಸಿದ ಏರ್ ಟೆಲ್ ಪೇಮೆಂಟ್ ಬ್ಯಾಂಕ್ ಗೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿಐ) ಐದು ಕೋಟಿ ರುಪಾಯಿ ದಂಡ ವಿಧಿಸಿದೆ.
ಗ್ರಾಹಕರಿಂದ ಸೂಕ್ತ ಅನುಮತಿಯಿಲ್ಲದೆ ಏರ್‌ಟೆಲ್ ಪೇಮೆಂಟ್ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ ಕುರಿತು ಪರಿಶೀಲನೆ ನಡೆಸಿದ ಬಳಿಕ ಆರ್ ಬಿಐ ಐದು ಕೋಟಿ ರುಪಾಯಿ ದಂಡ ವಿಧಿಸಿದೆ.
ಕೆವೈಸಿಗೆ ಸಂಬಂಧಿಸಿದಂತೆ ಕೇಂದ್ರೀಯ ಬ್ಯಾಂಕ್ ನೀಡಿದ್ದ ನಿರ್ದೇಶನಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಾರ್ಚ್ 7ರಂದು ಆರ್ ಬಿಐ ಏರ್ ಟೆಲ್ ಪೇಮೆಂಟ್ ಬ್ಯಾಂಕ್ ಗೆ 5 ಕೋಟಿ ರುಪಾಯಿ ದಂಡ ವಿಧಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಗ್ರಾಹಕರು ನೀಡಿದ ದೂರು ಮತ್ತು ಮಾಧ್ಯಮಗಳ ವರದಿಯನ್ನು ಆಧರಿಸಿ ಏರ್‌ಟೆಲ್ ಪೇಮೆಂಟ್ ಬ್ಯಾಂಕ್ ಖಾತೆಗಳಿಗೆ ಗ್ರಾಹಕರ ಅನುಮತಿ ಇಲ್ಲದೆ 167 ಕೋಟಿ ಹಣ ವರ್ಗಾವಣೆ ಮಾಡಿದ ಕುರಿತು ಆರ್ ಬಿಐ ತನಿಖೆ ನಡೆಸಿತ್ತು.