ಪ್ರಧಾನಿ ಮೋದಿ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್ ದ್ವಿಪಕ್ಷೀಯ ಮಾತುಕತೆ 
ದೇಶ

ಭಾರತ, ಫ್ರಾನ್ಸ್ ದ್ವಿಪಕ್ಷೀಯ ಮಾತುಕತೆ: ರಕ್ಷಣೆ, ಪರಮಾಣು ಸಹಕಾರ ಸೇರಿ 14 ಒಪ್ಪಂದಗಳಿಗೆ ಸಹಿ

ಭಾರತಕ್ಕೆ ಆಗಮಿಸಿದ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುವೆಲ್ ಮ್ಯಾಕ್ರೋನ್ ಅವರೊಡನೆ ಪ್ರಧಾನಿ ಮೋದಿ ವ್ಯಾಪಕ ಆವೃತ್ತಿಯ ಮಾತುಕತೆ...

ನವದೆಹಲಿ: ಭಾರತಕ್ಕೆ ಆಗಮಿಸಿದ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುವೆಲ್ ಮ್ಯಾಕ್ರೋನ್ ಅವರೊಡನೆ ಪ್ರಧಾನಿ ಮೋದಿ ವ್ಯಾಪಕ ಆವೃತ್ತಿಯ ಮಾತುಕತೆ ನಡೆಸಿದ್ದಾರೆ. ಅಲ್ಲದೆ ಭದ್ರತೆ, ಪರಮಾಣು ಶಕ್ತಿ, ವರ್ಗೀಕೃತ ಮಾಹಿತಿಯ ರಕ್ಷಣೆ ವಿಚಾರ ಸೇರಿ ಒಟ್ಟು ಹದಿನಾಲ್ಕು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ಶಿಕ್ಷಣ, ಪರಿಸರ, ನಗರಾಭಿವೃದ್ಧಿ, ಹಾಗೂ ರೈಲ್ವೆ ಕ್ಷೇತ್ರದಲ್ಲಿ ನಾನಾ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.
ಒಪ್ಪಂದಗಳಿಗೆ ಸಹಿ ಮಾಡಿದ ಬಳಿಕ ಎರಡೂ ರಾಷ್ಟ್ರಗಳ ನಾಯಕರು ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ರಕ್ಷಣೆ ಮತ್ತು ಭದ್ರತೆಯ ವಿಚಾರದಲ್ಲಿ ಎರಡು ದೇಶಗಳು ದೃಢವಾದ ಸಹಕಾರವನ್ನು ಹೊಂದಿವೆ ಎಂದು ಮೋದಿ ಹೇಳಿದರು.
ಭಯೋತ್ಪಾದನೆ ಪಿಡುಗನ್ನು ಎದುರಿಸುವ ಸಂಬಂಧ ಭಾರತ ಮತ್ತು ಫ್ರಾನ್ಸ್ ಒಟ್ಟಿಗೆ ಕೆಲಸ ಮಾಡಲಿದೆ ಎರಡೂ ರಾಷ್ಟ್ರಗಳ ನಡುವಿನ ರಕ್ಷಾಣಾ ಸಹಕಾರವು ಇದೀಗ ಹೊಸ ಎತ್ತರಕ್ಕೆ ತಲುಪಿದೆ ಎಂದು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್ ಹೇಳಿದ್ದಾರೆ.
ಇಬ್ಬರೂ ನಾಯಕರು ಇಂಡೋ ಫೆಸಿಪಿಕ್ ವಲಯದಲ್ಲಿ ಸಹಕಾರದ ಕುರಿತಂತೆ ಮಾತುಕತೆ ನಡೆಸಿದ್ದಾರೆ.
ಶುಕ್ರವಾರ ರಾತ್ರಿ ಭಾರತಕ್ಕೆ ಆಗಮಿಸಿದ್ದ ಮ್ಯಾಕ್ರೋನ್ ಅವರಿಗೆ ಶನಿವಾರ ಬೆಳಿಗ್ಗೆ ಔಪಚಾರಿಕ ಸ್ವಾಗತ ನೀಡಲಾಗಿತ್ತು. ನಾಲ್ಕು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿರುವ ಮ್ಯಾಕ್ರೋನ್ ಅವರನ್ನು ಪ್ರಧಾನಿ ಮೋದಿ ವಿಮಾನ ನಿಲ್ದಾಣದಲ್ಲಿ ಆದರದಿಂದ ಬರಮಾಡಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು