ಪ್ರಧಾನಿ ಮೋದಿ 
ದೇಶ

ಈ ವರ್ಷ ಅಂತರಾಷ್ಟ್ರೀಯ ಯೋಗ ದಿನಾಚರಣೆ ಮೈಸೂರಿನಲ್ಲಿ?

ಈ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಮುಖ್ಯ ಕಾರ್ಯಕ್ರಮ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ....

ನವದೆಹಲಿ: ಈ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಮುಖ್ಯ ಕಾರ್ಯಕ್ರಮ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುವ ಸಾಧ್ಯತೆ ಇದೆ. 
ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯು ಪಟ್ಟಿಯಲ್ಲಿ ಮೈಸೂರು, ಜೈಪುರ, ಹೈದರಾಬಾದ್ ಹಾಗೂ ಅಹಮದಾಬಾದ್ ಗಳು ಸ್ಥಾನ ಪಡೆದಿದ್ದು, ಅಂತಿಮವಾಗಿ ಈ ನಾಲ್ಕರಲ್ಲಿ ಒಂದು ನಗರವನ್ನು ಆಯ್ಕೆ ಮಾಡಲಾಗುತ್ತದೆ.
ಈ ನಾಲ್ಕು ನಗರಗಳ ಹೆಸರುಗಳನ್ನು ಪ್ರಧಾನಿ ಕಚೇರಿಗೆ ಶಿಫಾರಸು ಮಾಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ಪೈಕಿ ಒಂದನ್ನು ಆಯ್ಕೆ ಮಾಡಲಿದ್ದಾರೆ.
ಈ ವರ್ಷ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಮುಖ್ಯ ಕಾರ್ಯಕ್ರಮವನ್ನು ದೆಹಲಿಯಿಂದ ಹೊರಗಡೆ ಮಾಡಲು ನಿರ್ಧರಿಸಿದ್ದು, ಈ ಸಂಬಂಧ ಈಗಾಗಲೇ ಸಿದ್ಧತೆಗಳು ನಡೆದಿವೆ. ಸ್ಥಳ ಆಯ್ಕೆಗಾಗಿ ಮೈಸೂರು, ಅಹಮದಾಬಾದ್, ಜೈಪುರ ಮತ್ತು ಹೈದರಾಬಾದ್ ಗಳನ್ನು ಆಯ್ಕೆ ಮಾಡಲಾಗಿದೆ ಎಂದು ಆಯುಷ್ ಸಚಿವಾಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಭದ್ರಕೋಟೆ ಮುರಿಯಲು BJP-JDS ರಣತಂತ್ರ; HDK ನೇತೃತ್ವದಲ್ಲಿ ಮಹತ್ವದ ಸಭೆ..!

ಮಲೆನಾಡು, ಕರಾವಳಿ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಆದ್ಯತೆ: ಕೇಂದ್ರ ಸಚಿವ ವಿ. ಸೋಮಣ್ಣ