ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವುದು ಬಿಜೆಪಿಯಲ್ಲ, ಆರ್‌ಜೆಡಿ: ತೇಜ್ ಪ್ರತಾಪ್

ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಪುತ್ರ, ಬಿಹಾರ ಮಾಜಿ ಆರೋಗ್ಯ ಮಂತ್ರಿ ತೇಜ್ ಪ್ರತಾಪ್ ಯಾದವ್ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವುದು...

ತೇಜ್ ಪ್ರತಾಪ್ ಯಾದವ್
Vishwanath S
Updated On : 11 Mar 2018, 1:27 am
ಪಾಟ್ನಾ: ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಪುತ್ರ, ಬಿಹಾರ ಮಾಜಿ ಆರೋಗ್ಯ ಮಂತ್ರಿ ತೇಜ್ ಪ್ರತಾಪ್ ಯಾದವ್ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವುದು ಬಿಜೆಪಿಯಲ್ಲ ಆರ್‌ಜೆಡಿ ಎಂದು ಹೇಳಿದ್ದಾರೆ. 
ತೇಜ್ ಪ್ರತಾಪ್ ಯಾದವ್ ಅವರ ವಿವಾದಾತ್ಮಕ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಇದಕ್ಕೆ ಟ್ವೀಟರ್ ನಲ್ಲಿ ಸ್ಪಷ್ಟನೆ ನೀಡಿರುವ ಅವರು ತಾನು ಜಾತ್ಯತೀತ ಮಂದಿರ ಕುರಿತು ಈ ಹೇಳಿಕೆ ನೀಡಿದ್ದಾಗಿ ತಿಳಿಸಿದ್ದಾರೆ. 
ಬಿಜೆಪಿ ಯಾವಾಗಲೂ ರಾಮ ಮಂದಿರ ನಿರ್ಮಾಣದ ಬಗ್ಗೆ ಹೇಳುತ್ತಿದ್ದು ಇನ್ನೂ ಯಾವಾಗ ಎಂದು ಗೊತ್ತಾಗಿಲ್ಲ. ನಾವು ಹಿಂದೂ, ಮುಸ್ಲಿಂ, ಸಿಖ್, ಕ್ರೈಸ್ತರು ಸೇರಿದಂತೆ ಎಲ್ಲ ಧರ್ಮಗಳ ಬಡವರು, ದಲಿತರು ಎನ್ನದೆ ಒಟ್ಟು ಸೇರಿ ಪ್ರಾರ್ಥನೆ ಸಲ್ಲಿಸಬಹುದಾದ ಮಂದಿರ ನಿರ್ಮಿಸುತ್ತೇವೆ. ನಂತರ ಬಿಜೆಪಿ ಮಂದಿರ ವಿಷಯದಿಂದ ದೂರವುಳಿಯುತ್ತದೆ ಎಂದು ಟ್ವೀಟರ್ ಅವರು ವಿವರಣೆ ನೀಡಿದ್ದಾರೆ. 

Advertisement

Advertisement

ತೇಜ್ ಪ್ರತಾಪ್ ಅವರ ಈ ಹೇಳಿಕೆಗೆ ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಬಾಬರಿ ಮಸೀದಿ ಧ್ವಂಸವಾದಾಗ ಯುಪಿಎ ಸರ್ಕಾರದಲ್ಲಿ ಆರ್‌ಜೆಡಿ ಮೈತ್ರಿ ಪಕ್ಷವಾಗಿತ್ತು. ಇದಾದ ಬಳಿಕ ಉತ್ತರಪ್ರದೇಶ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಬಿಜೆಪಿ ಸರ್ಕಾರ ಕಾನೂನು ಬಾಹಿರವಾಗಿ ಕೆಳಗಿಳಿಸಲಾಗಿತ್ತು ಇವೆಲ್ಲವೂ ನರೇಂದ್ರ ಮೋದಿ ಅವರ ಪ್ರಭಾವ ಎಂದು ಬಿಜೆಪಿಯ ದರ್ಭಾಂಗ್ ಶಾಸಕ ಸಂಜಯ್ ಸರೋಗಿ ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments