ಜಮ್ಮು-ಕಾಶ್ಮೀರ: ಅನಂತ್'ನಾಗ್ ಜಿಲ್ಲೆಯಲ್ಲಿ ಎನ್'ಕೌಂಟರ್, 3 ಉಗ್ರರನ್ನು ಸದೆಬಡಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ...
ಅನಂತ್'ನಾಗ್; ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ.
ಅನಂತ್ ನಾಗ್ ಜಿಲ್ಲೆಯ ಹಕುರಾ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿರುವುದಾಗಿ ಖಚಿತ ಮಾಹಿತಿಗಳು ಲಭ್ಯವಾದ ಹಿನ್ನಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆಗಿಳಿದಿದ್ದವು. ಸೇನೆ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಉಗ್ರರು ಸೇನಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಈ ವೇಳೆ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಸೇನಾ ಪಡೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ.
ಪ್ರಸ್ತುತ ಕಾರ್ಯಾಚರಣೆ ಮುಂದುವರೆದಿದ್ದು, ಉಗ್ರರು ಹಾಗೂ ಸೇನಾಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.