ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿರುವ ಸಿಆರ್'ಪಿಎಫ್ ನೆಲೆ ಬಳಿ ಬಂದಿರುವ ಉಗ್ರರು ಗ್ರೆನೇಡ್ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಕುಲ್ಗಾಂ ಜಿಲ್ಲೆಯ ದಮ್ಹಾಲ್ ಹಂಜಿಪೊಲಾ ಎಂಬ ಪ್ರದೇಶದಲ್ಲಿರುವ ಸಿಆರ್'ಪಿಎಫ್ ನೆಲೆ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿ ಪರಾರಿಯಾಗಿದ್ದಾರೆಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.
ಉಗ್ರರು ಗ್ರೆನೇಡ್ ದಾಳಿ ನಡೆಸುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದರು, ಪರಾರಿಯಾಗಿರುವ ಉಗ್ರರಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆಂದು ತಿಳಿದುಬಂದಿದೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ವರದಿಗಳಿ ತಿಳಿಸಿವೆ.